ಪಾಳ್ಯ ಬೈಪಾಸ್ ನಲ್ಲಿ ಅಪಘಾತ : ವೃದ್ದೆ ಮೃತ
ರಾಷ್ಟ್ರೀಯ ಹೆದ್ದಾರಿ 75 ರ ಪಾಳ್ಯ ಬಳಿ ಘಟನೆ.
ಸಕಲೇಶಪುರ : ಮಗನ ಮನೆಗೆ ತೆರಳುತ್ತಿದ್ದಾಗ ಹೆದ್ದಾರಿಯಲ್ಲಿ ವೇಗವಾಗಿ ಬಂದ ಗುಡ್ಸ್ ವಾಹನ ವೃದ್ದೆಗೆ ಡಿಕ್ಕಿ ಹೊಡೆದ ಪರಿಣಾಮ ಮಗೆಹಳ್ಳಿಯ ನಿಂಗಮ್ಮ ಸ್ಥಳದಲ್ಲೇ ಮೃತ ಪಟ್ಟಿರುವ ಘಟನೆ ನೆಡೆದಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಿಯಾದ ನಾಮಫಲಕ ಆಳವಡಿಸದ ಹಿನ್ನಲೆಯಲ್ಲಿ ಅಪಘಾತ ಸಂಭವಿಸುತ್ತದೆ ಎಂದು ಕರವೇ ಜಿಲ್ಲಾ ಕಾರ್ಯದರ್ಶಿ ರಘು ಪಾಳ್ಯ ಕಾಮಗಾರಿ ನೆಡೆಸುತ್ತಿರುವ ಗುತ್ತಿಗೆ ಕಂಪನಿಯ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಸರಿಯಾಗಿ ವಾಹನ ಸವಾರರಿಗೆ ಹಾಗೂ ಪಾದಚಾರಿಗಳಿಗೆ ಸ್ಪಷ್ಟವಾಗಿ ಗೋಚರಿಸುವ ರೀತಿ ಹೆದ್ದಾರಿಯ ಎರಡು ಬದಿಯಲ್ಲಿ ನಾಮಫಲಕಗಳನ್ನು ಅಳವಡಿಸಬೇಕು ಇಲ್ಲದಿದ್ದರೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಮುಂದುವರಿಸಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.



