ಪಾಳ್ಯ ಬಳಿ ಭೀಕರ ಅಪಘಾತ : ಓರ್ವ ಸಾವು ಮೂವರಿಗೆ ಗಾಯ.
ಸಕಲೇಶಪುರ/ಆಲೂರು : ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಅಪಘಾತ ಸಂಭವಿಸಿ ವ್ಯಕ್ತಿಯೊಬ್ಬರು ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ.
ಕೆಲಸದ ನಿಮಿತ್ತ ಬೆಂಗಳೂರಿನಿಂದ ಕಾರ್ಕಳಕ್ಕೆ ಸ್ವಿಫ್ಟ್ ಕಾರ್ ನಲ್ಲಿ ಹೊರಟಿದ್ದ ಬಸವರಾಜ್ (46) ರವರಿಗೆ ಎದುರಿನಿಂದ ವೇಗವಾಗಿ ಬಂದ ಬ್ರಿಜಾ ಕಾರು ಡಿಕ್ಕಿ ಹೊಡೆದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಮೃತಪಟ್ಟಿದ್ದಾರೆ.
ಅಪಘಾತದ ರಭಸಕ್ಕೆ ಸ್ವಿಫ್ಟ್ ಕಾರು ನಜ್ಜುಗುಜ್ಜಾಗಿದ್ದು ಮೃತ ಬಸವರಾಜ್ ಅವರನ್ನು ಕಾರಿನಿಂದ ಹೊರ ತೆಗೆಯಲು ಹರಸಾಹಸ ಪಡುವಂತಾಯಿತು.
ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಮಗಾರಿ ನಡೆಯುತ್ತಿದ್ದು ರಸ್ತೆ ಒಂದು ಬದಿಯಲ್ಲಿ ಎರಡು ಕಡೆ ವಾಹನಗಳ ಓಡಾಟಕ್ಕೆ ಅವಕಾಶ ನೀಡಿದ್ದು ಯಾವುದೇ ಸೂಚನೆ ಫಲಕಗಳಿಲ್ಲದೆ ಇರುವುದು ಪದೇ ಪದೇ ಅಪಘಾತಗಳಿಗೆ ಕಾರಣವಾಗುತ್ತಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಿಯಾದ ನಾಮಫಲಕಗಳನ್ನು ಅಳವಡಿಸದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಗುತ್ತಿಗೆದಾರರಿಗೆ ಸ್ಥಳೀಯರು ಎಚ್ಚರಿಸಿದ್ದಾರೆ