ಕಾರ್ಜುವಳ್ಳಿ ಮಠದ ಸ್ವಾಮಿಗಳ ಆಶೀರ್ವಾದ ಪಡೆದ ಶಾಸಕ ಸಿಮೆಂಟ್ ಮಂಜುನಾಥ್.
ಸಕಲೇಶಪುರ : ಬಾಳೆಹೊನ್ನೂರು ಶಾಖಾ ಮಠ ಆಲೂರು ತಾಲೂಕಿನ ಕಾರ್ಜುವಳ್ಳಿ ಮಠಕ್ಕೆ ಶಾಸಕ ಸಿಮೆಂಟ್ ಮಂಜುನಾಥ್ ಗುರುವಾರ ಸಂಜೆ ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು.
ಸದಾಶಿವ ಶಿವಾಚಾರ್ಯ ಸ್ವಾಮಿಗಳನ್ನು ಭೇಟಿಯಾಗಿ ಕ್ಷೇತ್ರದ ಅಭಿವೃದ್ಧಿಗಾಗಿ ಕೈಗೊಳ್ಳಬೇಕಾದ ಕೆಲಸಗಳ ಕುರಿತು ಕೆಲಕಾಲ ಚರ್ಚೆ ನೆಡೆಸಿದರು.
ಈ ಸಂಧರ್ಭದಲ್ಲಿ ಆಲೂರು ಸಕಲೇಶಪುರ ತಾಲೂಕಿನ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು