ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೊಹಮ್ಮದ್ ಸಫ್ವನ್ ಚಿಕಿತ್ಸೆ ಫಲಕಾರಿಯಾಗದೆ ನಿಧನ
ಸಕಲೇಶಪುರ: ಕಳೆದ ಕೆಲವು ದಿನಗಳ ಹಿಂದೆ ಬಾಗೆ ಸಮೀಪ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೊಹಮ್ಮದ್ ಸಫ್ವನ್ (16) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪಟ್ಟಣದ ಹಳೇ ಸಂತೇವೇರಿ ಬಡಾವಣೆ ನಿವಾಸಿ ಅಬ್ದುಲ್ ವಾಹೀದ್ ಎಂಬುವರ ಪುತ್ರ ಬಾಗೆ ಜೆ.ಎಸ್.ಎಸ್ ಶಾಲೆಯಲ್ಲಿ 10 ನೇ ತರಗತಿ ಓದುತ್ತಿದ್ದು ತನ್ನ ಇತರ ಮೂವರ ಸ್ನೇಹಿತರ ಜೊತೆಗೆ ಕಳೆದ ಭಾನುವಾರ ಮುಂಜಾನೆ ರೋಜಾ ಮುಗಿಸಿಕೊಂಡು ಕಾರಿನಲ್ಲಿ ಹೋಗುವಾಗ ಬಾಗೆ ಸಮೀಪ ಮಾರುತಿ ರಿಡ್‌ಜ್ ಕಾರು ಅಪಘಾತಕ್ಕೀಡಾಗಿ ಕಾರಿನಲ್ಲಿದ್ದ ನಾಲ್ಕು ಮಂದಿ ಗಂಭೀರವಾಗಿ ಗಾಯಗೊಂಡಿದ್ದರು. ಹಾಸನದ ಕಾರುಣ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೊಹಮ್ಮದ್ ಸಫ್ವನ್
ರವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿತ್ತು.