Saturday, November 23, 2024
Homeಸುದ್ದಿಗಳುಸಕಲೇಶಪುರಹೊಂಗಡಹಳ್ಳ ಗ್ರಾಮ ಪಂಚಾಯಿತಿಯ ಜನಪ್ರತಿನಿಧಿಗಳಿಂದ ಮೂಲಸೌಕರ್ಯ ಅಭಿವೃದ್ಧಿಗೆ ಅಡ್ಡಿ ಪಡಿಸದಂತೆ ಅರಣ್ಯ ಇಲಾಖೆಗೆ ಮನವಿ.

ಹೊಂಗಡಹಳ್ಳ ಗ್ರಾಮ ಪಂಚಾಯಿತಿಯ ಜನಪ್ರತಿನಿಧಿಗಳಿಂದ ಮೂಲಸೌಕರ್ಯ ಅಭಿವೃದ್ಧಿಗೆ ಅಡ್ಡಿ ಪಡಿಸದಂತೆ ಅರಣ್ಯ ಇಲಾಖೆಗೆ ಮನವಿ.

ಹೊಂಗಡಹಳ್ಳ ಗ್ರಾಮ ಪಂಚಾಯಿತಿಯ ಜನಪ್ರತಿನಿಧಿಗಳಿಂದ ಮೂಲಸೌಕರ್ಯ ಅಭಿವೃದ್ಧಿಗೆ ಅಡ್ಡಿ ಪಡಿಸದಂತೆ ಅರಣ್ಯ ಇಲಾಖೆಗೆ ಮನವಿ.

ಸಕಾರಾತ್ಮಕವಾಗಿ ಸ್ಪಂದಿಸಿದ ಉಪ ಅರಣ್ಯ ಸಂರಕ್ಷಣಾಧಿಕಾರಿ ಬಸವರಾಜ್ .

ಸಕಲೇಶಪುರ : ತಾಲ್ಲೂಕಿನ ಗಡಿಯಂಚಿನ ಹೊಂಗಡಹಳ್ಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಅರಣ್ಯ ಇಲಾಖೆಯ ಜಾಗದಲ್ಲಿ ಅನುವು ಮಾಡಿಕೊಡುವಂತೆ ಹೊಂಗಡಹಳ್ಳ ಗ್ರಾಮ ಪಂಚಾಯಿತಿ ಅಧ್ಯಕ್ಷರು ಸದಸ್ಯರು ಗುರುವಾರ ಉಪ ಅರಣ್ಯ ಸಂರಕ್ಷಣಾಧಿಕಾರಿ ಬಸವರಾಜ್ ಅವರಿಗೆ ಮನವಿ ಸಲ್ಲಿಸಿದರು.

ಮಲೆನಾಡು ಅಭಿವೃದ್ಧಿ ಮಂಡಳಿಯ ಮಾಜಿ ಅಧ್ಯಕ್ಷರಾದ ಹೆಮ್ಮಿಗೆ ಮೋಹನ್, ಹಸಿರು ಭೂಮಿ ಪ್ರತಿಷ್ಠಾನದ ಮಾಜಿ ಅಧ್ಯಕ್ಷರಾದ ವೈಎನ್ ಸುಬ್ಬಸ್ವಾಮಿ ಮತ್ತು ಪರಿಸರ ಹೋರಾಟಗಾರರಾದ ಕಿಶೋರ್ ಕುಮಾರ್ ಮುಂತಾದವರು ಗ್ರಾಮಸ್ಥರೊಂದಿಗೆ ಸಭೆ ನಡೆಸಿ ಗ್ರಾಮದಲ್ಲಿ ನಡೆಸಬೇಕಿರುವ ನೀರಿನ ಟ್ಯಾಂಕ್ , ರಸ್ತೆ, ಮೊಬೈಲ್ ಟವರ್ ಮುಂತಾದ ಮೂಲಭೂತ ಸೌಕರ್ಯಗಳ ಕಾಮಗಾರಿಗಳಿಗೆ ಇರುವ ತಾಂತ್ರಿಕ ಅಡಚಣೆಗಳನ್ನು ಪರಿಹರಿಸಿಕೊಳ್ಳಲು ಅರಣ್ಯ ಅಧಿಕಾರಿಗಳನ್ನು ಭೇಟಿ ಮಾಡಿ ವಿವರಿಸಿದರು.

ಮನವಿಗೆ ಪೂರಕವಾಗಿ ಸ್ಪಂದಿಸಿದ ಉಪ ಅರಣ್ಯ ಸಂರಕ್ಷಣಾಧಿಕಾರಿ ,ಖುದ್ದಾಗಿ ನಾನೇ ಸ್ಥಳಕ್ಕೆ ಬಂದು ಪರಿಶೀಲಿಸಿ ಕಾನೂನು ರೀತಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಯತೀಶ್ ,ಸಹಕಾರ ಸಂಘದ ಅಧ್ಯಕ್ಷರಾದ ಪ್ರಸನ್ನ ಕುಮಾರ್ , ಶ್ರೀ ಕಾಗಿನಹರೆ ಚಾಮುಂಡೇಶ್ವರಿ ದೇವಸ್ಥಾನ ಸಮಿತಿ ಅಧ್ಯಕ್ಷರಾದ ಕೆ ಪಿ ಗುಂಡುರಾಜ್,ಗಣೇಶ್, ಚಂದನ್, ಚೇತನ್ ಸೇರಿದಂತೆ ಗ್ರಾಮ ಪಂಚಾಯಿತಿಯ ಸದಸ್ಯರು ಮುಂತಾದವರು ಇದ್ದರು.

RELATED ARTICLES
- Advertisment -spot_img

Most Popular