ನ.24 ರಂದು ಹೆತ್ತೂರಿನಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ.
ಸಕಲೇಶಪುರ: ತಾಲ್ಲೂಕಿನ ಹೆತ್ತೂರು ಹೋಬಳಿಯಲ್ಲಿ ಇದೇ ನವೆಂಬರ್ ೨೪ ರಂದು ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲು ತೀರ್ಮಾನಿಸಲಾಗಿದೆ.
ನಿನ್ನೆ ನಡೆದ ಪೂರ್ವ ಭಾವಿ ಸಭೆಯಲ್ಲಿ ಹೋಬಳಿಯ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಸಮ್ಮುಖದಲ್ಲಿ 30 ಹೆಚ್ಚು ಸಂಘ ಸಂಸ್ಥೆಗಳು ಭಾಗಿಯಾಗಿದ್ದವು.
ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮದ ಅಂಗವಾಗಿ ಮಲೆನಾಡಿನ ವೈಭವೀಕರಿಸುವ ಜನಪದ ಕಲಾ ತಂಡಗಳು ಹಾಗೂ ವಿವಿಧ ಶಾಲೆಗಳಿಂದ ಸ್ತಬ್ಧಚಿತ್ರಗಳ ಮೆರವಣಿಗೆ ನಡೆಯಲಿದೆ.