ಬಾಲ್ಯ ವಿವಾಹ ಕುರಿತು ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿದ ವಕೀಲ ಆರ್.ಎನ್ ಕೃಷ್ಣಮೂರ್ತಿ.
ಸಕಲೇಶಪುರ : ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಬಾಲ್ಯವಿವಾಹದ ಕುರಿತು ಉಪನ್ಯಾಸ ಕಾರ್ಯಕ್ರಮವನ್ನು ವಕೀಲರಾದ ಆರ್.ಎನ್ ಕೃಷ್ಣಮೂರ್ತಿರವರು ಗಿಡಕ್ಕೆ ನೀರೆರೆಯುವುದರ ಮೂಲಕ ಉದ್ಘಾಟಿಸಿ ಉಪನ್ಯಾಸ ನೀಡಿದರು. ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧವಾಗಿದ್ದು, ಬಾಲ್ಯ ವಿವಾಹ ನಿಷೇಧ ಕಾಯ್ದೆಯನ್ವಯ ಪ್ರತಿಯೊಬ್ಬ ಅಧಿಕಾರಿಗೂ ಬಾಲ್ಯ ವಿವಾಹ ತಡೆಯುವ ಅಧಿಕಾರವಿದೆ ಎಂದರು.
ರಾಜ್ಯದಲ್ಲಿ ಬಾಲ್ಯ ವಿವಾಹಗಳು ನಡೆಯುತ್ತಿರುವ ಕುರಿತು ದೂರುಗಳು ವ್ಯಾಪಕವಾಗಿದೆ. ಜಿಲ್ಲೆಯ ಕೆಲವೆಡೆ ಬಾಲ್ಯ ವಿವಾಹ ನಡೆಯುವುದು ಅಧಿಕಾರಿಗಳ ಗಮನಕ್ಕೆ ಕಂಡು ಬಂದರೆ ಬಾಲ್ಯ ವಿವಾಹಗಳನ್ನು ತಡೆಯಬೇಕು. ಬಾಲ್ಯ ವಿವಾಹದ ಬಗ್ಗೆ ಯಾವುದೇ ಮಾಹಿತಿ ದೊರೆತರೂ ಅಧಿಕಾರಿಗಳು ಕೂಡಲೆ ಸ್ಪಂದಿಸಿ, ಅದನ್ನು ತಡೆಯಲು ಮುಂದಾಗಬೇಕು. ಬಾಲ್ಯ ವಿವಾಹದಿಂದ ಅಪ್ರಾಪ್ತ ವಯಸ್ಸಿನಲ್ಲಿ ಗರ್ಭಣಿಯಾಗಿ ಹೆರಿಗೆ ಸಮಯದಲ್ಲಿ ತಾಯಿ ಮತ್ತು ಶಿಶು ಅಕಾಲಿಕ ಮರಣಕ್ಕೆ ತುತ್ತಾಗುತ್ತಾರೆ. ಬಾಲ್ಯ ವಿವಾಹಕ್ಕೆ ಒಳಗಾದ ಮಕ್ಕಳು ಮಾನಸಿಕ ದೌರ್ಬಲ್ಯತೆಗೆ ಒಳಗಾಗಿ ಮಾನಸಿಕ ಸ್ಥೆರ್ಯ ಕಳೆದುಕೊಳ್ಳುತ್ತಾರೆ. ಬಾಲ್ಯ ವಿವಾಹವು ಮಕ್ಕಳ ಭವಿಷ್ಯವನ್ನೇ ಅಂಧಕಾರಕ್ಕೆ ಸಿಲುಕಿಸುವ ಅನಾಗರಿಕ ಕಾರ್ಯವಾಗಿದೆ ಎಂದು ಹೇಳಿದರು.
ಉಪನ್ಯಾಸದ ವೇಳೆ ಕಾಲೇಜಿನ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.