ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದೆ. ಕಾಡಾನೆಗಳ ದಾಳಿಯಿಂದ ಅಪಾರ ಪ್ರಮಾಣದ ಬೆಳೆ ನಾಶವಾಗಿರುವ ಘಟನೆ ಸಕಲೇಶಪುರ ತಾಲ್ಲೂಕಿನ, ಕೆರೋಡಿ, ತಾರಿಬೈಲು, ಶಿವನಹಳ್ಳಿ ಗ್ರಾಮಗಳಲ್ಲಿ
ನಾಟಿ ಮಾಡಿದ್ದ ಭತ್ತದ ಗದ್ದೆಗಳಲ್ಲೂ ಓಡಾಡಿರುವ ಗಜಪಡೆ ಭತ್ತದ ಸಸಿಗಳನ್ನು ಸಂಪೂರ್ಣ ತುಳಿದು ಹಾಕಿವೆ. ಹತ್ತಾರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಬೆಳೆ ನಾಶದಿಂದ ಭಾರಿ ನಷ್ಟ ಉಂಟಾಗಿದ್ದು, ಬಡರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡುವಂತೆ ರೈತರು ಆಗ್ರಹಿಸಿದ್ದಾರೆ. ಎರಡು ದಶಕಗಳಿಂದ ಜೀವಂತವಾಗಿರುವ ಕಾಡಾನೆಗಳ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡು ಹಿಡಿಯದ ಸರ್ಕಾರ ಹಾಗೂ ಅರಣ್ಯಾಧಿಕಾರಿಗಳ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.