ಹುಬ್ಬಳ್ಳಿಯಲ್ಲಿ ಮಾನವೀಯತೆ ಮೆರೆದ ಸಕಲೇಶಪುರ ಶಾಸಕ.
ರಸ್ತೆ ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಲು ನೆರವಾಗಿ ,ಪೊಲೀಸರಿಗೆ ಮಾಹಿತಿ ನೀಡಿದ ಶಾಸಕ ಸಿಮೆಂಟ್ ಮಂಜು.
ಹುಬ್ಬಳ್ಳಿ : ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುಗಳಿಗೆ ಶಾಸಕ ಸಿಮೆಂಟ್ ಮಂಜು ನೆರವು ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಬೆಳಗಾವಿ ವಿಧಾನಸಭಾ ಅಧಿವೇಶನ ಮುಗಿಸಿ ಸ್ವಕ್ಷೇತ್ರಕ್ಕೆ ಹಿಂದಿರುಗುತ್ತಿರುವ ವೇಳೆ ಹುಬ್ಬಳ್ಳಿ ಬಳಿ ಲಾರಿ ಹಾಗೂ ಫಾರ್ಚುನರ್ ಕಾರ್ ನಡುವೆ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಐವರಿಗೂ ಗಂಭೀರ ಗಾಯಗಳಾಗಿದ್ದು ಇದೇ ಮಾರ್ಗವಾಗಿ ಬರುತ್ತಿದ್ದ ಶಾಸಕರು ಘಟನೆಯನ್ನು ನೋಡಿದ ತಕ್ಷಣವೇ ಕಾರು ನಿಲ್ಲಿಸಿ ಫಾರ್ಚುನರ್ ಕಾರಿನೊಳಗೆ ಸಿಲುಕಿದ್ದ ಗಾಯಳುಗಳನ್ನು ಹೊರಗಡೆ ತರಲು ಸಹಾಯ ಮಾಡಿ ,ಸ್ಥಳೀಯ ಆಂಬುಲೆನ್ಸ್ ಗಳಿಗೆ ಕರೆ ಮಾಡಿ ಗಾಯಾಳುಗಳಿಗೆ ಹೆಗಲು ನೀಡಿ ಆಸ್ಪತ್ರೆಗೆ ಶಿಫ್ಟ್ ಮಾಡಿಸಿ ಸ್ಥಳೀಯ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದರು. ಬೆಳಗಾವಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಫಾರ್ಚುನರ್ ಕಾರಿನಲ್ಲಿದವರಿಗೆ ಅಪಘಾತವಾಗಿ ಗಾಯಗೊಂಡಿದ್ದವರನ್ನು ಸ್ಥಳೀಯ ಆಸ್ಪತ್ರೆಗೆ ಶಿಫ್ಟ್ ಮಾಡಿಸಿದ್ದಾರೆ ಎಂದು ತಿಳಿದುಬಂದಿದೆ.ಶಾಸಕರ ಮಾನವೀಯ ಕಾರ್ಯಕ್ಕೆ ಗಾಯಾಳುಗಳು ಹಾಗೂ ಸ್ಥಳೀಯರು ಧನ್ಯವಾದ ಅರ್ಪಿಸಿದರು