ಸಕಲೇಶಪುರ : ಪವಿತ್ರ ಮೃತ್ತಿಕೆ(ಮಣ್ಣು) ಸಂಗ್ರಹಣಾ ಕಾರ್ಯಕ್ಕೆ ಪುರಸಭಾ ಅಧ್ಯಕ್ಷ ಕಾಡಪ್ಪ ಚಾಲನೆ.
ನಾಡಪ್ರಭು, ಆದರ್ಶ ಆಡಳಿತಗಾರ ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ಉದ್ಘಾಟನೆ ಸಂಬಂಧ ಪವಿತ್ರ ಮೃತ್ತಿಕೆ(ಮಣ್ಣು) ಸಂಗ್ರಹಣಾ ಕಾರ್ಯಕ್ಕೆ ಪುರಸಭಾ ಅಧ್ಯಕ್ಷ, ಸದಸ್ಯರು ಹಾಗೂ ಅಧಿಕಾರಿ ವೃಂದದವರು ಪುರಸಭಾ ಆವರಣದಲ್ಲಿ ಶನಿವಾರ ಚಾಲನೆ ನೀಡಿದರು.
ಪುರಸಭೆಯವರು ಸಂಗ್ರಹಣೆ ಮಾಡಿದ್ದ ಪವಿತ್ರ ಮೃತ್ತಿಕೆಯನ್ನು ನಾಡಪ್ರಭು ಕೆಂಪೇಗೌಡರ ರಥಯಾತ್ರೆ ವಾಹನದಲ್ಲಿ ಸಂಗ್ರಹಿಸಿಟ್ಟರು. ಬಳಿಕ ಪವಿತ್ರ ಮೃತ್ತಿಕೆ ಸಂಗ್ರಹಣೆ ವಾಹನವು ತಾಲೂಕಿನ ವಿವಿಧ ಪಂಚಾಯತಿಗಳಿಗೆ ಸಂಚರಿಸಲಿದ್ದು, ಈ ವಾಹನಕ್ಕೆ ಹಸಿರು ನಿಶಾನೆ ತೋರಿಸಿದರು.
ಈ ಸಂಧರ್ಭದಲ್ಲಿ ಪುರಸಭಾ ಮುಖ್ಯಧಿಕಾರಿ ಮಂಜುನಾಥ್, ತಾಲೂಕು ಆಡಳಿತದಿಂದ ಶಿರಸ್ತೆದಾರ್ ಉಮೇಶ್ ಸೇರಿದಂತೆ ಪುರಸಭೆಯ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು, ಸಂಘಟನೆಯ ಮುಖಂಡರು ಹಾಜರಿದ್ದರು.