Saturday, April 19, 2025
Homeಸುದ್ದಿಗಳುಸಕಲೇಶಪುರಸಕಲೇಶಪುರ :ಅಕ್ಕಮಹಾದೇವಿ ಮಹಿಳಾ ವೇದಿಕೆಯ ತಾಲೂಕು ನೂತನ ಅಧ್ಯಕ್ಷರಾಗಿ ಶಶಿಕಲಾ ಲೋಕೇಶ್ ಆಯ್ಕೆ

ಸಕಲೇಶಪುರ :ಅಕ್ಕಮಹಾದೇವಿ ಮಹಿಳಾ ವೇದಿಕೆಯ ತಾಲೂಕು ನೂತನ ಅಧ್ಯಕ್ಷರಾಗಿ ಶಶಿಕಲಾ ಲೋಕೇಶ್ ಆಯ್ಕೆ

ಅಕ್ಕಮಹಾದೇವಿ ಮಹಿಳಾ ವೇದಿಕೆಯ ನೂತನ ಅಧ್ಯಕ್ಷರಾಗಿ ಶಶಿಕಲಾ ಲೋಕೇಶ್ ಆಯ್ಕೆ

ಸಕಲೇಶಪುರ :- ಸಕಲೇಶಪುರದಲ್ಲಿ ಇಂದು ನಡೆದ ಮಲೆನಾಡು ವೀರಶೈವ ಸಮಾಜದ ವಾರ್ಷಿಕ ಮಹಾಸಭೆಯಲ್ಲಿ ಅಕ್ಕಮಹಾದೇವಿ ಮಹಿಳಾ ವೇದಿಕೆಯ ನೂತನ ಅಧ್ಯಕ್ಷರಾಗಿ ಶಶಿಕಲ ಲೋಕೇಶ್ ಆಯ್ಕೆಯಾಗಿದ್ದಾರೆ.

 ಶಶಿಕಲಾ ಅವರು ಮೂಲತಃ ಬಾಳ್ಳುಪೇಟೆ ಸಮೀಪದ ಹೊಸಗದ್ದೆ ಗ್ರಾಮದವರಾಗಿದ್ದು ಕೆಲವು ವರ್ಷಗಳಿಂದ ಸಕಲೇಶಪುರ ಪಟ್ಟಣದಲ್ಲಿ ವಾಸವಾಗಿದ್ದು ಸಮಾಜದ ಕಾರ್ಯದಲ್ಲಿ ಸಕ್ರಿಯವಾಗಿ ಕೊಡಗಿಸಿಕೊಂಡಿದ್ದರಿಂದ ಸಕಲೇಶಪುರ ತಾಲೂಕು ಅಕ್ಕಮಹಾದೇವಿ ಮಹಿಳಾ ವೇದಿಕೆಗೆ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

 ಅಕ್ಕಮಹಾದೇವಿ ಮಹಿಳಾ ವೇದಿಕೆಗೆ ನಿಕಟಪೂರ್ವ ಅಧ್ಯಕ್ಷರಾಗಿದ್ದ ಶ್ರೀಮತಿ ರೇಖಾ ಸುರೇಶ್ ರವರು ಸಮಾಜದ ವತಿಯಿಂದ ಹಲವಾರು ಕಾರ್ಯಕ್ರಮಗಳನ್ನು ಏರ್ಪಡಿಸಿ ಅಕ್ಕಮಹಾದೇವಿ ಮಹಿಳಾ ಸಮಾಜದ ಏಳಿಗೆಗೆ ಬಹಳಷ್ಟು ಶ್ರಮಿಸಿದ್ದರು.

RELATED ARTICLES
- Advertisment -spot_img

Most Popular