Friday, April 4, 2025
Homeಸುದ್ದಿಗಳುಕೂಲಿ ಕಾರ್ಮಿಕನ ಮೇಲೆ ಚಿರತೆ ಅಟ್ಯಾಕ್ : ಗಾಯಳುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ

ಕೂಲಿ ಕಾರ್ಮಿಕನ ಮೇಲೆ ಚಿರತೆ ಅಟ್ಯಾಕ್ : ಗಾಯಳುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ

ಕೂಲಿ ಕಾರ್ಮಿಕನ ಮೇಲೆ ಚಿರತೆ ಅಟ್ಯಾಕ್ : ಗಾಯಳುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ

ಹಾಸನ : ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಹೂವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಸಲ್ಮಾನ್ ಖಾನ್ (38) ಚಿರತೆ ದಾಳಿಯಿಂದ ಗಾಯಗೊಂಡ ದುರ್ದೈವಿ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಚಿರತೆ ದಾಳಿ ಮಾಡಿದ್ದು ರೈತ ಸಲ್ಮಾನ್‌ಖಾನ್‌ ಚಿರತೆಯೊಂದಿಗೆ ಹೋರಾಡಿ ಪ್ರಾಣ ಉಳಿಸಿಕೊಂಡಿದ್ದಾನೆ. ದಾಳಿಯಿಂದ ಗಂಭಿರ ಗಾಯಗೊಳಗಾದ ಸಲ್ಮಾನ್ ಖಾನ್ ನನ್ನು ಸ್ಥಳೀಯರ ತಾಲೂಕಿನ ಆಸ್ಪತ್ರೆಗೆ ದಾಖಲಿಸಿದ್ದು ಹೆಚ್ಚಿನ ಚಿಕಿತ್ಸೆಗೆ ಹಾಸನ ನಗರದ ಹಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಚಿರತೆ ಸೆರೆ ಹಿಡಿಯುವಂತೆ ಹೂವಿನಹಳ್ಳಿ ಗ್ರಾಮಸ್ಥರ ಆಗ್ರಹಿಸಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಹೊಳೆನರಸೀಪುರ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -spot_img

Most Popular