ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷೆ ನಿಧನ
ಸಕಲೇಶಪುರ :ತಾಲೂಕಿನ ಹೊಸೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಝರಿನ ಮಂಜುನಾಥ್(47) ಅವರು ನಿಧನರಾಗಿದ್ದಾರೆ.
ಕೆಲ ವರ್ಷಗಳಿಂದ ಅನಾರೋಗ್ಯದಿಂದ ಬಳಳುತ್ತಿದ್ದ ಝರಿನ ರವರು ಇಂದು ಮುಂಜಾನೆ ಹೃದಯಘಾಯದಿಂದ ಸಾವನಪ್ಪಿದ್ದಾರೆ. ಕಳೆದ 4 ವರ್ಷಗಳ ಹಿಂದೆ ಜೆಡಿಎಸ್ ಬೆಂಬಲದಿಂದ ಹೊಸೂರು ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಮೃತರು ಪತಿ, ಓರ್ವ ಪುತ್ರಿ,ಓರ್ವ ಪುತ್ರನನ್ನು ಅಗಲಿದ್ದಾರೆ. ಮೃತರ ಅಂತ್ಯ ಸಂಸ್ಕಾರವು ಹಿಂದೂ ಧರ್ಮದ ಸಂಪ್ರದಾಯದಂತೆ ಸ್ವಗ್ರಾಮದಲ್ಲಿ ನಡೆಯಲಿದೆ ಎಂದು ತಿಳಿದುಬಂದಿದೆ.ಝರಿನ ನಿಧನದ ಹಿನ್ನಲೆಯಲ್ಲಿ ಶಾಸಕ ಸಿಮೆಂಟ್ ಮಂಜು, ಮಾಜಿ ಶಾಸಕ ಎಚ್ ಕೆ ಕುಮಾರಸ್ವಾಮಿ ಸೇರಿದಂತೆ ಹೊಸೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಸಿಬ್ಬಂದಿ ವರ್ಗ ಸಂತಾಪ ಸೂಚಿಸಿದೆ.