Tuesday, March 25, 2025
Homeಸುದ್ದಿಗಳುಬಿ.ಎಸ್.ವೈ ಆಪ್ತ ಕಾ.ಪು. ಸಿದ್ದಲಿಂಗಸ್ವಾಮಿ ನಿಧನ.

ಬಿ.ಎಸ್.ವೈ ಆಪ್ತ ಕಾ.ಪು. ಸಿದ್ದಲಿಂಗಸ್ವಾಮಿ ನಿಧನ.

ಬಿ.ಎಸ್.ವೈ ಆಪ್ತ ಕಾ.ಪು. ಸಿದ್ದಲಿಂಗಸ್ವಾಮಿ ನಿಧನ.

ಮೈಸೂರು : ಬಿಜೆಪಿ ಹಿರಿಯ ಮುಖಂಡ, ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ ಆಪ್ತ ಕಾ.ಪು. ಸಿದ್ದಲಿಂಗಸ್ವಾಮಿ ಇಂದು ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಹಲವು ದಿನಗಳಿಂದ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.ಅದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ,ಕಾ.ಪು. ಸಿದ್ದಲಿಂಗಸ್ವಾಮಿ ಅವರು ೨೦೧೩ ರಲ್ಲಿ ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ವಿರುದ್ಧ ಕೆಜೆಪಿ ಪಕ್ಷದಿಂದ ಸ್ಪರ್ಧಿಸಿದ್ದರು.ಕೆಲ ವರ್ಷಗಳ ಹಿಂದೆ ಸಕಲೇಶಪುರ ತಾಲೂಕಿನ ಬಾಳ್ಳುಪೇಟೆ ಸಮೀಪ ಕಾಫಿ ತೋಟ ಖರೀದಿಸಿ ತಾಲ್ಲೂಕಿನ ಜನರ ಒಡನಾಟ ಇರಿಸಿಕೊಂಡಿದ್ದರು.

ಕಾ.ಪು. ಸಿದ್ದಲಿಂಗಸ್ವಾಮಿ ಅಂತ್ಯಕ್ರಿಯೆ ಇಂದು ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಸ್ವ ಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

RELATED ARTICLES
- Advertisment -spot_img

Most Popular