Tuesday, December 3, 2024
Homeಸುದ್ದಿಗಳುಸಕಲೇಶಪುರಕುನಿಗನಹಳ್ಳಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಸಂಗಪ್ಪ ಉಪಾಧ್ಯಕ್ಷರಾಗಿ ಶಶಿಕಲಾ ಆಯ್ಕೆಯಾಗಿದ್ದಾರೆ.

ಕುನಿಗನಹಳ್ಳಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಸಂಗಪ್ಪ ಉಪಾಧ್ಯಕ್ಷರಾಗಿ ಶಶಿಕಲಾ ಆಯ್ಕೆಯಾಗಿದ್ದಾರೆ.

ಕುನಿಗನಹಳ್ಳಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಸಂಗಪ್ಪ ಉಪಾಧ್ಯಕ್ಷರಾಗಿ ಶಶಿಕಲಾ ಆಯ್ಕೆಯಾಗಿದ್ದಾರೆ.

ಸಕಲೇಶಪುರ :ಕುನಿಗನಹಳ್ಳಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಸಂಗಪ್ಪ ಎಂ. ಸಿ ಹಾಗೂ ಉಪಾಧ್ಯಕ್ಷರಾಗಿ ಶಶಿಕಲಾ ಆಯ್ಕೆಯಾಗಿದ್ದಾರೆ.

ತಾಲೂಕಿನ ಬೆಳಗೋಡು ಹೋಬಳಿ ಕುನಿಗನಹಳ್ಳಿ ಗ್ರಾಮ ಪಂಚಾಯತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ ಸೋಮವಾರ ಶಾಂತಿಯುತವಾಗಿ ಮುಕ್ತಾಯಗೊಂಡಿತು.

ಶಿಲ್ಪಾ ಜಗದೀಶ್ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಅಧ್ಯಕ್ಷ ಸ್ಥಾನಕ್ಕೆ ವಿರೂಪಾಕ್ಷ ಮತ್ತು ಸಂಗಪ್ಪ ಎಂ. ಸಿ ನಾಮಪತ್ರ ಸಲ್ಲಿಸಿದ್ದರು.ತಾರ ಮಹೇಶ್ ರಾಜೀನಾಮೆಯಿಂದ ತೆರವಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಶಶಿಕಲಾ ಮತ್ತು ಲಕ್ಷ್ಮಿ ಉಮೇದುವಾರಿಕೆ ಸಲ್ಲಿಸಿದರು. 11 ಜನ ಸದಸ್ಯ ಬಲದ ಗ್ರಾಮ ಗ್ರಾಮ ಪಂಚಾಯತಿಯಲ್ಲಿ ಸಾಮಾನ್ಯ ಕ್ಷೇತ್ರಕ್ಕೆ ಮೀಸಲಾಗಿದ್ದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಎಂ ಸಿ ಸಂಗಪ್ಪ ಹಾಗೂ ಶಶಿಕಲಾ ತಲಾ 6 ಮತ ಮತಗಳನ್ನು ಪಡೆಯುವ ಮೂಲಕ ಗ್ರಾಮ ಪಂಚಾಯತಿಗೆ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದರು. ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸಂಗಪ್ಪ ಮಾತನಾಡಿ, ಪಂಚಾಯಿತಿಯ ಎಲ್ಲಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಗ್ರಾಮ ಪಂಚಾಯಿತಿಯ ಅಭಿವೃದ್ಧಿಗೆ ಶ್ರಮಿಸುವುದಾಗಿ ಹೇಳಿದರು. ಚುನಾವಣಾ ಅಧಿಕಾರಿಯಾಗಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಮಕೃಷ್ಣ ಕಾರ್ಯ ನಿರ್ವಹಿಸಿದರು.

RELATED ARTICLES
- Advertisment -spot_img

Most Popular