ಮೆಣಸು ಹಾಗೂ ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್ ನೀಡಿದ ಶಾಸಕ ಸಿಮೆಂಟ್ ಮಂಜು.
ಬೆಳೆಗಾರರ ಬೆಳೆ ವಿಮಾ ಯೋಜನೆ ಪಾವತಿಗೆ ಮೂರು ದಿನ ವಿಸ್ತರಣೆ ಮಾಡಿದ ತೋಟಗಾರಿಕಾ ಸಚಿವರು.
ಬೆಂಗಳೂರು : ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ(RWBCIS) ಅನುಷ್ಠಾನ ಸಂಬಂಧ 2024- 25 ಸಾವಿನ ಮುಂಗಾರು ಮತ್ತು ಹಿಂಗಾರು ಹಂಗಾಮಗಳಿಗೆ ಜಿಲ್ಲಾ ಕ್ಲಸ್ಟರ್ ವಾರು ವಿಮ ಸಂಸ್ಥೆಗಳು ನಿಗದಿಪಡಿಸಿದ್ದ ಅಂತಿಮ ದಿನಾಂಕವನ್ನು ಮೂರು ದಿನ ವಿಸ್ತರಣೆ ಮಾಡಲಾಗಿದೆ.
ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕ ಸಿಮೆಂಟ್ ಮಂಜುನಾಥ್ ಇಂದು ಬೆಂಗಳೂರಿನಲ್ಲಿ ತೋಟಗಾರಿಕಾ ಸಚಿವ ಎಸ್. ಎಸ್ ಮಲ್ಲಿಕಾರ್ಜುನ್ ಅವರನ್ನು ಭೇಟಿ ಮಾಡಿ ವಿಮೆ ಪಾವತಿಯ ದಿನಾಂಕವನ್ನು ವಿಸ್ತರಣೆ ಮಾಡುವಂತೆ ಮನವಿ ಮಾಡಿದರು. ಈ ಕುರಿತಂತೆ ಪರಿಶೀಲನೆ ನಡೆಸಿದ ಸಚಿವರು ವಿಮೆ ಪಾವತಿಗೆ ಕೇವಲ ಐದು ದಿನಗಳು ಕಾಲಾವಕಾಶ ಇದ್ದಿದ್ದನ್ನು ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮೂರು ದಿನಗಳ ಕಾಲ ವಿಸ್ತರಣೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.