Friday, November 22, 2024
Homeಸುದ್ದಿಗಳುಸಕಲೇಶಪುರಬಾಗೆ ಗ್ರಾಮದ ಬಳಿ ಅಂಡರ್ ಪಾಸ್ ನಿರ್ಮಿಸುವ ಕುರಿತು ಅಧಿಕಾರಿಗಳು ಪರಿಶೀಲಿಸುವಂತೆ ಸಚಿವರ ಸೂಚನೆ.

ಬಾಗೆ ಗ್ರಾಮದ ಬಳಿ ಅಂಡರ್ ಪಾಸ್ ನಿರ್ಮಿಸುವ ಕುರಿತು ಅಧಿಕಾರಿಗಳು ಪರಿಶೀಲಿಸುವಂತೆ ಸಚಿವರ ಸೂಚನೆ.

ಬಾಗೆ ಗ್ರಾಮದ ಬಳಿ ಅಂಡರ್ ಪಾಸ್ ನಿರ್ಮಿಸುವ ಕುರಿತು ಅಧಿಕಾರಿಗಳು ಪರಿಶೀಲಿಸುವಂತೆ ಸಚಿವರ ಸೂಚನೆ.

ಸಕಲೇಶಪುರ : ರಾಷ್ಟ್ರೀಯ ಹೆದ್ದಾರಿ 75 ಹಾದು ಹೋಗುವ ಬಾಗೆ ಗ್ರಾಮದ ಬಳಿ ಅಂಡರ್ ಪಾಸ್ ನಿರ್ಮಾಣದ ಕುರಿತಂತೆ ಅಧಿಕಾರಿಗಳು ಪರಿಶೀಲನೆ ನಡೆಸುವಂತೆ ಲೋಕಪೋಯೋಗಿ ಸಚಿವ ಸತೀಶ್ ಜಾರಕಿಹೊಳಿ ಸೂಚನೆ ನೀಡಿದರು.

ಶನಿವಾರ ಶಿರಾಡಿ ಘಾಟ್ ಸುರಂಗ ಮಾರ್ಗ ಕುರಿತಂತೆ ಪರಿಶೀಲನೆಗೆ ಸಕಲೇಶಪುರಕ್ಕೆ ಆಗಮಿಸಿದ್ದ ಸಚಿವರಿಗೆ ಬಾಗೆ ಗ್ರಾಮದ ಸಾರ್ವಜನಿಕರ ಒತ್ತಾಯದ ಮೇರೆಗೆ ಅಂಡರ್ ಪಾಸ್ ನಿರ್ಮಿಸುವ ಕುರಿತು ಪರಿಶೀಲನೆ ನಡೆಸಿದರು.

ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಚತುಷ್ಪತ ಕಾಂಕ್ರೀಟ್ ರಸ್ತೆ ನಿರ್ಮಾಣವಾಗುತ್ತಿದ್ದು ರಸ್ತೆ ನಿರ್ಮಾಣದ ನಂತರ ಬೇಲೂರು – ಸೋಮವಾರಪೇಟೆ ರಾಜ್ಯ ಹೆದ್ದಾರಿಯ ಬಾಗೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಸ್ಥಳದಲ್ಲಿ ಕಾಮಗಾರಿಯು ಅವೈಜ್ಞಾನಿಕತೆಯಿಂದ ಕೂಡಿದ್ದು ಅಧಿಕ ಭಾರ ವಾಹನಗಳು ಸಂಚರಿಸಲು ಸಾಧ್ಯವಾಗುತ್ತಿಲ್ಲ ಹಾಗೂ ಬಾಗೆ ಗ್ರಾಮದ ವೃತ್ತದ ಬಳಿ ಶಾಲೆ ಇದ್ದು ವಿದ್ಯಾರ್ಥಿಗಳು ಹಾಗೂ ನೂರಾರು ಸಾರ್ವಜನಿಕರು ರಸ್ತೆಯನ್ನು ದಾಟಲು ಜೀವ ಕೈ ಹಿಡಿದುಕೊಂಡು ಹೆದ್ದಾರಿ ರಸ್ತೆಯನ್ನು ದಾಟಬೇಕಿದೆ ಆದ್ದರಿಂದ ಕೂಡಲೇ ರಾಷ್ಟ್ರೀಯ ದಾರಿ ಪ್ರಾಧಿಕಾರದ ಅಧಿಕಾರಿಗಳು ಬಾಗೆ ಗ್ರಾಮದ ವೃತ್ತದಲ್ಲಿ ಅಂಡರ್ ಪಾಸ್ ನಿರ್ಮಿಸುವಂತೆ ಸಾರ್ವಜನಿಕರು ಸಚಿವರಿಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೈರಮುಡಿ ಚಂದ್ರು, ಕೆಪಿಸಿಸಿ ಸದಸ್ಯ ಯಡೇಹಳ್ಳಿ ಮಂಜುನಾಥ್,ಬಾಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಜೈ ಶಂಕರ್, ಕಾಂಗ್ರೆಸ್ ಮುಖಂಡ ಮುರಳಿ ಮೋಹನ್,ಬೆಳಗೋಡು ಹೋಬಳಿ ಕಾಂಗ್ರೆಸ್ ಮುಖಂಡ ದೊಡ್ಡದಿಣ್ಣೆ ಮಂಜೇಗೌಡ,ಬಾಗೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ರಾಕೇಶ್, ಗ್ರಾಮ ಪಂಚಾಯಿತಿ ಸದಸ್ಯ ಚಾರ್ಲ್ಸ್, ಸಮಾಜ ಸೇವಕ ಹೆನ್ರಿ,ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಉಪಸ್ಥಿತರಿದ್ದರು.

RELATED ARTICLES
- Advertisment -spot_img

Most Popular