ಕಾಡಾನೆ ದಾಳಿಯಿಂದ ಮೃತ ಪಟ್ಟ ದಿವಾಕರ್ ಶೆಟ್ಟಿ ಕುಟುಂಬಸ್ಥರಿಗೆ ಪರಿಹಾರ ಧನದ ಚೆಕ್ ವಿತರಿಸಿದ ಶಾಸಕ ಸಿಮೆಂಟ್ ಮಂಜು.
ಸಕಲೇಶಪುರ : ತಾಲೂಕಿನ ವಾಟೆಹೊಳೆ ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟ ದಿವಾಕರ್ ರೈ ಕುಟುಂಬಕ್ಕೆ ಶಾಸಕ ಸಿಮೆಂಟ್ ಮಂಜು ಮಧ್ಯ ರಾತ್ರಿಯ ವೇಳೆಗೆ ಬಂದು 15 ಲಕ್ಷ ರೂಗಳ ಪರಿಹಾರದ ಚೆಕ್ ವಿತರಿಸಿದರು. ಬೆಂಗಳೂರಿನ ವಿಕ್ಟೊರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದಿವಾಕರ್ ರೈ ರವರ ಅಂತಿಮ ದರ್ಶನ ವನ್ನು ಪಡೆದಿದ್ದ ಶಾಸಕರು ಈ ಸಂದರ್ಭದಲ್ಲಿ ಸರ್ಕಾರದ ಪರಿಹಾರ ಕೊಡಿಸುವ ಭರವಸೆ ನೀಡಿದ್ದರು. ಬಿಜೆಪಿ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಬಾಗಿಯಾಗಿ ನಂತರ ವಿಧಾನಸಭಾ ಅಧಿವೇಶನದಲ್ಲಿ ಬಾಗಿಯಾಗಿ ಚೆಕ್ ವಿತರಣೆ ಮಾಡಲು ಬೆಂಗಳೂರಿಂದ ಹೊರಟು ಮಧ್ಯ ರಾತ್ರಿಯ ವೇಳೆಗೆ ಮೃತರ ಮನೆಗೆ ಹೋಗಿ ಅವರ ಕುಟುಂಬಕ್ಕೆ ಪರಿಹಾರದ ಚೆಕ್ ಕೊಟ್ಟಿರುವುದಕ್ಕೆ ಸಾರ್ವಜನಿಕರು ಶ್ಲಾಘನೆ ವ್ಯಕ್ತ ಪಡಿಸಿದ್ದಾರೆ..