ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೆ ಭೂ ಕುಸಿತ : ಕೆಲ ಕಾಲ ವಾಹನ ಸಂಚಾರ ಬಂದ್
ಸಕಲೇಶಪುರ : ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಗೆ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಇಂದು ಮತ್ತೆ ಭೂ ಕುಸಿತ ಉಂಟಾಗಿದೆ.
ಎತ್ತಿನಹಳ್ಳ ಪೈಪ್ ಲೈನ್ ಹಾದು ಹೋಗುವ ಹೆಗ್ಗದೆ ಕಪ್ಪಳ್ಳಿ ಮಧ್ಯದಲ್ಲಿ ಭೂ ಕುಸಿತವಾಗಿದ್ದು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುವ ವಾಹನ ಸಂಚಾರದಲ್ಲಿ ಕೆಲ ಕಾಲ ವ್ಯತ್ಯಯ ಉಂಟಾಗಿತ್ತು. ತಕ್ಷಣವೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಜೆಸಿಬಿ ಸ್ಥಳಕ್ಕೆ ಆಗಮಿಸಿ ರಸ್ತೆ ಮೇಲೆ ಬಿದ್ದಿದ್ದ ಮಣ್ಣನು ತೆರವುಗೊಳಿಸಿದ ನಂತರ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ.