ಶಾಲೆಗಳಿಗೆ ಮಕ್ಕಳನ್ನು ಕಳುಹಿಸದಂತೆ ಶಾಸಕ ಸಿಮೆಂಟ್ ಮಂಜು ಮನವಿ : ಏನಾದರು ಅನಾಹುತ ಸಂಭವಿಸಿದಲ್ಲಿ ಜಿಲ್ಲಾಧಿಕಾರಿಗಳೇ ನೇರ ಹೊಣೆ : ಸಾರ್ವಜನಿಕರು ಎಚ್ಚರದಿಂದ ಇರಬೇಕು
ಸಕಲೇಶಪುರ :ಬಾರಿ ಮಳೆ ಸುರಿಯುತ್ತಿರುವುದರಿಂದ ಮಕ್ಕಳ ಸುರಕ್ಷಾ ದೃಷ್ಟಿಯಿಂದ ಪೋಷಕರು ಇಂದು ಶಾಲೆಗಳಿಗೆ ತಮ್ಮ ಮಕ್ಕಳನ್ನು ಕಳುಹಿಸಬಾರದು ಹಾಗೂ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರದಿಂದ ಇರಬೇಕು ಎಂದು ಶಾಸಕ ಸಿಮೆಂಟ್ ಮಂಜು ಹೇಳಿಕೆ ನೀಡಿದ್ದಾರೆ.
. ತಾಲೂಕಿನಲ್ಲಿ ಬಾರಿ. ಮಳೆ ಸುರಿಯುತ್ತಿದ್ದು ಮಳೆಯಿಂದಾಗಿ ಹಲವು ರಸ್ತೆಗಳ ಸಂಪರ್ಕ ಕಡಿತಗೊಂಡಿದೆ. ಯಾವುದೇ ಸಂದರ್ಭದಲ್ಲಿ ಮರಗಳು ಬಿದ್ದು ಅನಾಹುತ ಸಂಭವಿಸುವ ಸಾಧ್ಯತೆಗಳು ಹೆಚ್ಚಿದೆ. ಈಗಾಗಲೇ ಹಲವು ಶಾಲಾ ಕೊಠಡಿಗಳು ಮಳೆಯಿಂದ ಕುಸಿದಿದೆ. ಈ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳು ತಕ್ಷಣ ಶಾಲೆಗಳಿಗೆ ರಜೆ ಘೋಷಣೆ ಮಾಡಬೇಕಿತ್ತು. ಆದರೆ ರಜೆ ಘೋಷಣೆ ಮಾಡಲು ಜಿಲ್ಲಾಧಿಕಾರಿಗಳು ಮುಂದಾಗಿಲ್ಲ. ಮಳೆಯಿಂದ ಮಕ್ಕಳಿಗೆ ಏನಾದರು ಅನಾಹುತ ಆದಲ್ಲಿ ಜಿಲ್ಲಾಧಿಕಾರಿಗಳೇ ನೇರ ಹೊಣೆಯಾಗಿರುತ್ತಾರೆ. ಮುಂಜಾಗ್ರತ ಕ್ರಮವಾಗಿ ಮಕ್ಕಳ ಸುರಕ್ಷಾ ದೃಷ್ಟಿಯಿಂದ ಪೋಷಕರು ಇಂದು ಶಾಲೆಗಳಿಗೆ ತಮ್ಮ ಮಕ್ಕಳನ್ನು ಕಳುಹಿಸಬಾರದು ಹಾಗೂ ಸಾರ್ವಜನಿಕರು ಹಳ್ಳ, ಕೆರೆ, ನದಿ ಪಾತ್ರಗಳಿಗೆ ಹೋಗಬಾರದು ಮತ್ತು ವಿದ್ಯುತ್ ತಂತಿಗಳನ್ನು ತುಳಿಯದಂತೆ ಎಚ್ಚರ ವಹಿಸಬೇಕೆಂದು ಮನವಿ ಮಾಡುತ್ತಿದ್ದೇನೆ ಎಂದಿದ್ದಾರೆ