ಹಿರೇಮಂದಿ : ಅಂಗನವಾಡಿ ಕೇಂದ್ರ ಉದ್ಘಾಟನೆ
ಸಕಲೇಶಪುರ :ಮಕ್ಕಳಲ್ಲಿ ಮಾನವೀಯ ಬಾಂಧವ್ಯ ವೃದ್ಧಿಸಲು ಅಂಗನವಾಡಿ ಕೇಂದ್ರಗಳು ಪೂರಕವಾಗಲಿವೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.
ತಾಲೂಕಿನ ಹಾನುಬಾಳು ಹೋಬಳಿ ದೇವಾಲದಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಿರೇಮಂದಿ ಗ್ರಾಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಹಿರಿಯನಾಗರೀಕರ ಸಬಲೀಕರಣ ಇಲಾಖೆ ಆಯೋಜಿಸಿದ್ದ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದರು.
ಇಂದಿನ ಈ ಕಾಲಘಟ್ಟದಲ್ಲಿ ಮಕ್ಕಳು ಮಾನವೀಯ ಬಾಂಧವ್ಯ ಕಡಿಮೆಗೊಳಿಸುತ್ತಿದ್ದಾರೆ. ಇದರಿಂದ ಮಕ್ಕಳಲ್ಲಿ ಸಮಾಜ ಗೌರವಿಸುವ ಗುಣ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಇದು ಸಮಾಜಕ್ಕೆ ಮಾರಕವಾಗುವ ದಿನಗಳು ದೂರವಿಲ್ಲ. ಈ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರಗಳು ಎಚ್ಚೆತ್ತುಕೊಂಡು ಗುಣಾತ್ಮಕ ಸಂಸ್ಕಾರ ಕಲಿಸುವ ಕೇಂದ್ರಗಳಾಗಿ ಭವಿಷ್ಯದ ದಿನದಲ್ಲಿ ಅಂಗನವಾಡಿ ಕೇಂದ್ರಗಳು ಸಮಾಜ ಗಟ್ಟಿಗೊಳಿಸುವ ಮಕ್ಕಳನ್ನು ರೂಪಿಸುವ ಕೇಂದ್ರಗಳಾಗಿ ಮೂಡಿಬರಲಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ದಿನೇಶ್ , ತಾಲೂಕು ಪಂಚಾಯತಿ ಸಹಾಯಕ ನಿರ್ದೇಶಕ ಆದಿತ್ಯ,ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕಮಲಮ್ಮ,ಉಪಾಧ್ಯಕ್ಷ ರವೀಂದ್ರ ಕುಮಾರ್ , ಸದಸ್ಯರಾದ ಅರವಿಂದ್, ಭರತ್, ಕಮಲಮ್ಮ, ದಿನೇಶ್, ಭವ್ಯ, ದ್ರಾಕ್ಷಯಿಣಿ ಪಂಚಾಯತಿ ಅಭಿವೃದ್ಧಿ ಅಧಿಕಾರಿ ರಾಮಚಂದ್ರ, ಅಂಗನವಾಡಿ ಕೇಂದ್ರದ ಮೇಲ್ವಿಚಾರಿಕಿ ಜ್ಯೋತಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.