ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ ಶಾಸಕ- ಸಿಮೆಂಟ್ ಮಂಜುನಾಥ್
ಸಕಲೇಶಪುರ : ಮಕ್ಕಳಲ್ಲಿ ಪಠ್ಯತರ ಚಟುವಟಿಕೆಗಳ ಬಗ್ಗೆ ಆಸಕ್ತಿ ಮೂಡಿಸಿ ಅವರಲ್ಲಿರುವ ಸುಪ್ತ ಪ್ರತಿಭೆಗಳನ್ನು ಹೊರ ತೆಗೆಯಲು ಪ್ರತಿಭಾ ಕಾರಂಜಿ ಕಲೋತ್ಸವ ಕಾರ್ಯಕ್ರಮ ಸೂಕ್ತ ವೇದಿಕೆಯಾಗಿದೆ ಎಂದು ಶಾಸಕ ಸಿಮೆಂಟ್ ಮಂಜುನಾಥ್ ಹೇಳಿದರು.
ಬುಧುವಾರ ತಾಲೂಕಿನ ಹಾನುಬಾಳು ಗ್ರಾಮದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಸಮೂಹ ಸಂಪನ್ಮೂಲ ಕೇಂದ್ರ ಹಾನುಬಾಳು ಮತ್ತು ರಕ್ಷಿದಿ ಕ್ಲಸ್ಟರ್ ಮಟ್ಟದ
ಪ್ರತಿಭಾ ಕಾರಂಜಿ ಕಲೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭ ಉದ್ಘಾಟನೆ ಮಾಡಿ ಮಾತನಾಡಿದರು.ಇಂತ ಕಾರ್ಯಕ್ರಮಗಳು ಮಕ್ಕಳ ಮುಂದಿನ ಭವಿಷ್ಯದಲ್ಲಿ ಅವರು ಯಾವ ಕ್ಷೇತ್ರದಲ್ಲಿ ಉತ್ತಮ ಆಸಕ್ತಿ ಹೊಂದಿದ್ದಾರೆ ಎಂಬುದನ್ನು ಗುರುತಿಸಲು ಪೂರಕವಾಗುತ್ತದೆ.ಪ್ರತಿಯೊಂದು ಮಗುವಿನಲ್ಲೂ ಒಂದಲ್ಲ ಒಂದು ಸಾಂಸ್ಕೃತಿಕ ಪ್ರತಿಭೆ ಅಡಗಿರುತ್ತದೆ. ಅದನ್ನು ಗುರುತಿಸಿ ಅನಾವರಣ ಮಾಡುವ ಮೂಲಕ ಮಕ್ಕಳು ಸರ್ವಾಂಗೀಣ ಬೆಳವಣಿಗೆ ಸಾಧಿಸಲು ಅವಕಾಶ ಕಲ್ಪಿಸಬೇಕು. ಸೋಲು, ಗೆಲುವಿನ ಬಗ್ಗೆ ಯೋಚಿಸದೆ ಸ್ಪರ್ಧೆಗಳಲ್ಲಿ ಎಲ್ಲ ವಿದ್ಯಾರ್ಥಿಗಳು ಭಾಗವಹಿಸಬೇಕು ಎಂದರು. ಕರ್ನಾಟಕ ಪಬ್ಲಿಕ್ ಶಾಲೆಯ ಪೋಷಕರ ಸಮಿತಿ ಉತ್ತಮವಾದ ಕೆಲಸ ಮಾಡುತ್ತಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ಇದೇ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರದವರಿಗೆ ಬಹುಮಾನ ವಿತರಣೆ ಮಾಡಿದರು.
ಈ ಸಂಧರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪ, ಗ್ರಾಮ ಪಂಚಾಯತಿ ಅಧ್ಯಕ್ಷ ಸಂತೋಷ್, SDMC ಅಧ್ಯಕ್ಷ ಅರುಣ್, ಹಿರಿಯ ವಿದ್ಯಾರ್ಥಿ ಬಳಗದ ಅಧ್ಯಕ್ಷ ಚಂದ್ರಶೇಖರ, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹರೀಶ್. ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಮಂಜುನಾಥ್, ಕೆಪಿಎಸ್ ಶಾಲೆಯ ಮುಖ್ಯ ಶಿಕ್ಷಕ ನರಸಿಂಹ ಮೂರ್ತಿ, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರು ಹರೀಶ್
ಪ್ರಾರ್ಥಮಿಕ ಶಾಲೆಗಳ ಸಂಘದ ಕಾರ್ಯದರ್ಶಿ ದೋರೇಶ್,ಕೆಪಿಎಸ್ ಶಾಲೆ ಪ್ರಾಂಶುಪಾಲರು ದಕ್ಷಿಣ ಮೂರ್ತಿ.ಗ್ರಾಪಂ ಸದಸ್ಯ ಮೋಹನ್ ಅಚ್ಚರಡಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.