ಸಿಮೆಂಟ್ ಮಂಜು ಮನವಿ ಮೇರೆಗೆ ಇಂದು ಸಕಲೇಶಪುರಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಭೇಟಿ.
ಸಕಲೇಶಪುರ : ಕಾಡಾನೆ ಹಾವಳಿಯಿಂದ ಬೆಳೆ ಹಾನಿ ಜೊತೆಗೆ ಜೀವ ಹಾನಿ ಪ್ರಮಾಣ ಏರಿಕೆಯಾಗುತ್ತಿದ್ದು ತಾಲೂಕಿಗೆ ಆಗಮಿಸಿ ಪರಿಸ್ಥಿತಿ ಅವಲೋಕಿಸುವಂತೆ ಶಾಸಕ ಸಿಮೆಂಟ್ ಮಂಜು ಅರಣ್ಯ ಸಚಿವರಾದ ಈಶ್ವರ್ ಖಂಡ್ರೆಯವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಮನವಿ ಮಾಡಿದ ಹಿನ್ನೆಲೆ ಇಂದು ಸಕಲೇಶಪುರ ಸಚಿವರು ಆಗಮಿಸುತ್ತಿದ್ದಾರೆ.
ಇತ್ತೀಚಿಗಷ್ಟೇ ಕಾಡಾನೆ ದಾಳಿಯಿಂದ ಮೃತಪಟ್ಟ ಷಣ್ಮುಖ ಅವರ ಮನೆಗೆ ಮಧ್ಯಾಹ್ನ 1:30 ಕ್ಕೆ ಭೇಟಿ ನೀಡಿ ನಂತರ ಸಚಿವರ ನೇತೃತ್ವದಲ್ಲಿ ಶಾಸಕರು ಸೇರಿದಂತೆ ಅಧಿಕಾರಿಗಳ ಉನ್ನತ ಮಟ್ಟದ ಸಭೆಯನ್ನು ಜಿಲ್ಲಾ ಅರಣ್ಯ ಭಾಗದಲ್ಲಿ ಏರ್ಪಡಿಸಲಾಗಿದೆ ಎಂದು ತಿಳಿದು ಬಂದಿದೆ. ಸಭೆಯಲ್ಲಿ ಶಾಸಕ ಸಿಮೆಂಟ್ ಮಂಜು ಅವರು ಮಲೆನಾಡು ಭಾಗದ ಕಾಡಾನೆ ಸಮಸ್ಯೆಯಿಂದ ಪರಿತಪಿಸುತ್ತಿರುವ ರೈತರು, ಬೆಳೆಗಾರರು ಹಾಗೂ ಸಾರ್ವಜನಿಕರ ಪರವಾಗಿ ಸಚಿವರು ಮತ್ತು ಸರ್ಕಾರಕ್ಕೆ ಮನದಟ್ಟು ಮಾಡಿಸಿ ಶಾಶ್ವತ ಪರಿಹಾರಕ್ಕಾಗಿ ಆಗ್ರಹಿಸಲಾಗುವುದು ಎಂದು ತಿಳಿಸಿದ್ದಾರೆ.