ಮಾರನಹಳ್ಳಿ ಸಮೀಪ ಭೀಕರ ಅಪಘಾತ..ಬಸ್ ಹಾಗೂ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ, ಹಲವರಿಗೆ ಗಂಭೀರ ಗಾಯ
ಸಕಲೇಶಪುರ : ರಾಷ್ಟ್ರೀಯ ಹೆದ್ದಾರಿ 75 ಶಿರಾಡಿಘಾಟ್ ಮಾರನಹಳ್ಳಿ ಸಮೀಪ ಇಂದು ಸಂಜೆ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿ ಬಸ್ಸಿನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ ಹಾಗೂ ಟ್ಯಾಂಕರ್ ಚಾಲಕನ ಕಾಲು ಸಿಲುಕಿಕೊಂಡಿದ್ದು ಸ್ಥಳೀಯರ ನೆರವಿನಿಂದ ತೆಗೆಯಲಾಗಿದೆ. ಗಾಯಾಳುಗಳನ್ನು ಆಂಬ್ಯುಲೆನ್ಸ್ ಸಹಾಯದಿಂದ ಸಕಲೇಶಪುರದ ಕ್ರಾಫರ್ಡ್ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ