ಶಾರ್ಪ್ ಶೂಟರ್ ವೆಂಕಟೇಶ್ ಸಾವಿನ ಕುರಿತು ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದ ಹೋರಾಟಗಾರ ಎಡೆಹಳ್ಳಿ ಆರ್ ಮಂಜುನಾಥ್
ಸಕಲೇಶಪುರ : ಇಂದು ಕಾಡಾನೆ ದಾಳಿಗೆ ಬಲಿಯಾದ ಶಾರ್ಪ್ ಶೂಟರ್ ವೆಂಕಟೇಶ್ ಅವರ ಸಾವಿನ ಕುರಿತು ಉನ್ನತ ಮಟ್ಟದ ತನಿಖೆಯಾಗಬೇಕೆಂದು ಹೋರಾಟಗಾರ ಯಡೇಹಳ್ಳಿ ಆರ್ ಮಂಜುನಾಥ್ ಒತ್ತಾಯಿಸಿದ್ದಾರೆ.
ಇಂದು ಸಂಜೆ ವೆಂಕಟೇಶ್ ಅವರ ಪಾರ್ಥಿವ ಶರೀರದ ದರ್ಶನ ಪಡೆದು ಮಾಧ್ಯಮದೊಂದಿಗೆ ಮಾತನಾಡಿದ ಮಂಜುನಾಥ್,ಕಾಡಾನೆಗೆ ಚಿಕಿತ್ಸೆ ನೀಡುವ ವೇಳೆ ಅರವಳಿಕೆ ಚುಚ್ಚುಮದ್ದು ನೀಡಲು ವೆಂಕಟೇಶ್ ಅವರನ್ನು ಬಳಸಿಕೊಂಡ ಅರಣ್ಯ ಇಲಾಖೆ ಸೂಕ್ತ ಭದ್ರತೆಗಳಿಲ್ಲದೆ ಕಾರ್ಯಚರಣೆಗೆ ಕಳಿಸಿದ್ದು ಅರಣ್ಯ ಇಲಾಖೆ ನಿರ್ಲಕ್ಷಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಸಿಸಿಎಫ್, ಡಿಎಫ್ಓ, ಎಸಿಎಫ್ ಹಾಗೂ ಆರ್ ಎಫ್ಓ ಅಧಿಕಾರಿಗಳ ಸಮ್ಮುಖದಲ್ಲಿ ಕಾರ್ಯಚರಣೆ ನಡೆಯುತ್ತಿದ್ದರು ಕನಿಷ್ಠ ಸುರಕ್ಷತೆಯನ್ನು ವಹಿಸುವಲ್ಲಿ ಅರಣ್ಯ ಇಲಾಖೆ ನಿರ್ಲಕ್ಷ ಮಾಡಿದ್ದರಿಂದ ವೆಂಕಟೇಶ್ ಅವರು ತಮ್ಮ ಪ್ರಾಣ ಕಳೆದುಕೊಳ್ಳಬೇಕಾಗಿದೆ. ಈ ಹಿನ್ನಲೆ ಈಗಾಗಲೇ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಕೂಡಲೇ ಈ ಎಲ್ಲಾ ಅಧಿಕಾರಿಗಳ ಮೇಲೆ ಹೈಕೋರ್ಟಿನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಉನ್ನತ ಮಟ್ಟದ ತನಿಖೆಯಾಗಬೇಕೆಂದು ಆಗ್ರಹಿಸಿದ್ದಾರೆ.