Monday, March 24, 2025
Homeಸುದ್ದಿಗಳುಕಾಡಾನೆ ಹಾವಳಿಗೆ ರಾಜ್ಯ ಸರ್ಕಾರದ ಮಹತ್ವದ ನಿರ್ಣಯ ಕನ್ನಡಪರ ಸಂಘಟನೆಗಳ ಒಕ್ಕೂಟದಿಂದ ಸ್ವಾಗತ ...

ಕಾಡಾನೆ ಹಾವಳಿಗೆ ರಾಜ್ಯ ಸರ್ಕಾರದ ಮಹತ್ವದ ನಿರ್ಣಯ ಕನ್ನಡಪರ ಸಂಘಟನೆಗಳ ಒಕ್ಕೂಟದಿಂದ ಸ್ವಾಗತ ಕನ್ನಡಪರ ಸಂಘಟನೆಗಳ ಹೋರಾಟಕ್ಕೆ ಸಂದ ಜಯ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಅಭಿನಂದನೆ ಸಲ್ಲಿಸಿದ ಹೋರಾಟಗಾರರು.

 

ಕಾಡಾನೆ ಹಾವಳಿಗೆ ರಾಜ್ಯ ಸರ್ಕಾರದ ಮಹತ್ವದ ನಿರ್ಣಯ ಕನ್ನಡಪರ ಸಂಘಟನೆಗಳ ಒಕ್ಕೂಟದಿಂದ ಸ್ವಾಗತ

ಕನ್ನಡಪರ ಸಂಘಟನೆಗಳ ಹೋರಾಟಕ್ಕೆ ಸಂದ ಜಯ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಅಭಿನಂದನೆ ಸಲ್ಲಿಸಿದ ಹೋರಾಟಗಾರರು.

ಸಕಲೇಶಪುರ : ಹತ್ತಾರು ವರ್ಷಗಳಿಂದ ಕಾಡಾನೆ ಹಾವಳಿ ವಿರುದ್ಧ ಹಲವಾರು ಪ್ರತಿಭಟನೆಗಳು ಹೋರಾಟಗಳು ಅನಿರ್ದಿಷ್ಟ ಅವಧಿ ಮುಷ್ಕರಗಳನ್ನು ನಡೆಸಿಕೊಂಡು ಬರುವ ಮೂಲಕ ಸರ್ಕಾರದ ಕಣ್ತೆರೆಸುವ ಕೆಲಸವನ್ನು ಕನ್ನಡ ಪರ ಸಂಘಟನೆಗಳ ಒಕ್ಕೂಟ ಹಾಗೂ ಕಾಡಾನೆ ಹಾವಳಿ ಸಂತ್ರಸ್ತರ ಸಮಿತಿ ನಡೆಸಿಕೊಂಡು ಬಂದಿದ್ದರ ಫಲವಾಗಿ ಸೋಮವಾರ ರಾಜ್ಯ ಸರ್ಕಾರ ಕಾಡಾನೆ ಹಾವಳಿ ಹಾಗೂ ಸಂತ್ರಸ್ತರಿಗೆ ನೆರವಾಗುವ ನಟಿನಲ್ಲಿ ಮಹತ್ವದ ನಿರ್ಣಯ ಕೈಗೊಂಡಿದೆ ಎಂದು ಮುಖಂಡರು ತಿಳಿಸಿದ್ದಾರೆ.

ಮಲೆನಾಡು ಭಾಗದ ರೈತರು ಬೆಳೆಗಾರರು ಹಾಗೂ ಸಾರ್ವಜನಿಕರ ಪರವಾಗಿ ಸಂಘಟನೆಗಳು ಹಲವಾರು ಹೋರಾಟಗಳನ್ನು ನಡೆಸುತ್ತಾ ಬಂದಿದೆ ಸಂಘಟನೆಗಳ ಹೋರಾಟದ ಗಂಭೀರತೆಯನ್ನು ಅರಿತ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮಹತ್ವದ ನಿರ್ಣಯಗಳನ್ನು ಕೈಗೊಳ್ಳುವ ಮೂಲಕ ಕಾಡಾನೆ ಹಾವಳಿಗೆ ಅಲ್ಪ ಪ್ರಮಾಣದ ಪರಿಹಾರವನ್ನು ಸೂಚಿಸಿದ್ದಾರೆ ಅವರಿಗೆ ಕನ್ನಡಪರ ಸಂಘಟನೆಗಳ ಒಕ್ಕೂಟ ಹಾಗೂ ಕಾಡಾನೆ ಹಾವಳಿ ಸಂತ್ರಸ್ತರು ಸಮಿತಿಯ ಪರವಾಗಿ ಅಭಿನಂದನೆ ಸಲ್ಲಿಸುತ್ತೇವೆ ಎಂದಿದ್ದಾರೆ.

 


ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ತಾಲೂಕು ಅಧ್ಯಕ್ಷ ಆರ್.ಎಸ್ ದಿನೇಶ್ ಮಾತನಾಡಿ

ಆನೆ-ಮಾನವ ಸಂಘರ್ಷಕ್ಕೆ ಸಂಬಂಧಿಸಿದಂತೆ ಹಾಸನ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಹಾಗೂ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಮಾನವ ಜೀವ ಹಾನಿಗೆ ನೀಡುವ ಪರಿಹಾರ ಮೊತ್ತವನ್ನು 7.5 ಲಕ್ಷ ರೂ.ಗಳಿಂದ 15 ಲಕ್ಷ ರೂ. ಗಳಿಗೆ, ಶಾಶ್ವತ ಅಂಗವಿಕಲತೆಗೆ ನೀಡುವ ಪರಿಹಾರವನ್ನು 5 ಲಕ್ಷ ರೂ. ಗಳಿಂದ 10 ಲಕ್ಷ ರೂ. ಗಳಿಗೆ, ಭಾಗಶಃ ಅಂಗವಿಕಲತೆಗೆ ನೀಡುವ ಪರಿಹಾರವನ್ನು 2.5 ಲಕ್ಷ ರೂ. ಗಳಿಂದ 5 ಲಕ್ಷ ರೂ.ಗಳಿಗೆ, ಗಾಯಗೊಂಡವರಿಗೆ ನೀಡುವ ಪರಿಹಾರ ಮೊತ್ತ 30 ಸಾವಿರ ರೂ. ಗಳಿಂದ 60 ಸಾವಿರ ರೂ. ಗಳಿಗೆ, ಆಸ್ತಿ ಹಾನಿಗೆ ಪರಿಹಾರ ಮೊತ್ತ 10 ಸಾವಿರ ರೂ. ಗಳಿಂದ 20 ಸಾವಿರ ರೂ. ಗಳಿಗೆ ಹಾಗೂ ಜೀವ ಹಾನಿ ಅಥವಾ ಶಾಶ್ವತ ಅಂಗವಿಕಲತೆಯ ಪ್ರಕರಣಗಳಿಗೆ ನೀಡುವ ಕುಟುಂಬ ಮಾಸಾಶನದ ಮೊತ್ತ ಮಾಸಿಕ ರೂ. 2,000 ದಿಂದ 4,000 ರೂ. ಗಳಿಗೆ ಹೆಚ್ಚಿಸಲು ತೀರ್ಮಾನ ಕೈಗೊಂಡಿರುವುದು ಜೊತೆಗೆ ಬೆಳೆಹಾನಿಗೆ ನೀಡುತ್ತಿರುವ ಪರಿಹಾರವನ್ನೂ ದ್ವಿಗುಣಗೊಳಿಸಲು ನಿರ್ಧರಿಸಲಾಗಿರುವುದು ಉತ್ತಮ ಬೆಳವಣಿಗೆ ಎಂದಿದ್ದಾರೆ.

ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯ ತಾಲೂಕು ಅಧ್ಯಕ್ಷ ಜಾನೇಕೆರೆ ಸಾಗರ್ ಮಾತಾನಾಡಿ,

ರಾಜ್ಯ ಬಿಜೆಪಿ ಸರ್ಕಾರ ಸಕಲೇಶಪುರ ಭಾಗದ ಸಾರ್ವಜನಿಕರಿಗೆ ಬಹುದೊಡ್ಡ ಬೇಡಿಕೆಯನ್ನು ಈಡೇರಿಸಿದೆ ಕಳೆದ ತಿಂಗಳು ನವಂಬರ್ 1 ರಂದು ಕಾಡಾನೆ ದಾಳಿಗೆ ಮೃತಪಟ್ಟ ಮನು ಶವವನ್ನ ಇರಿಸಿಕೊಂಡು ಹೊರತೆ ಪ್ರತಿಭಟನೆ ನಡೆಸಿದಾಗ ರಾಜ್ಯದ ಮುಖ್ಯಮಂತ್ರಿಗಳು ನನ್ನ ಮೊಬೈಲ್ಗೆ ದೂರವಾಣಿ ಕರೆ ಮಾಡಿ ಕೊಟ್ಟ ಭರವಸೆಗಳಲ್ಲಿ ಸ್ವಲ್ಪವನ್ನು ಈಡೇರಿಸಿದ್ದಾರೆ, ಕೊಟ್ಟ ಮಾತನ್ನು ಉಳಿಸಿಕೊಂಡು ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿರವರಾಗಿದ್ದಾರೆ ಎಂದರು. ಮುಖ್ಯಮಂತ್ರಿಗಳ ಬೆಳಗ್ಗೆ ಕನ್ನಡಪರ ಸಂಘಟನೆಗಳ ಹೋರಾಟದ ತೀವ್ರತೆಯನ್ನು ಮುಟ್ಟಿಸುವಲ್ಲಿ ಶ್ರಮವಹಿಸಿದ ಉಸ್ತುವಾರಿ ಸಚಿವ ಗೋಪಾಲಯ್ಯನವರಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ.

ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬರೆದ ತಾಲೂಕು ಅಧ್ಯಕ್ಷ ರಮೇಶ್ ಪೂಜಾರಿ ಮಾತನಾಡಿ,

ರಾಜ್ಯ ಸರ್ಕಾರ ತೆಗೆದುಕೊಂಡಿರುವ ಮಹತ್ವದ ನಿರ್ಣಯದ ಫಲವನ್ನು ಮನು ಕುಟುಂಬದವರಿಗೆ ಸಲ್ಲಿಸಬೇಕು ಕಾಡಾನೆ ದಾಳಿಯಿಂದ ಮೃತಪಟ್ಟ ಮನು ಕುಟುಂಬದವರು ಶವವನ್ನು ಹೋರಾಟಗಾರರ ಕೈಗಿಟ್ಟು ಸಮಸ್ಯೆ ಬಗೆಹರಿಸುವಂತೆ ಬೆನ್ನೆಲುಬಾಗಿ ನಿಂತಿದ್ದರ ಪರವಾಗಿ ನಾವೆಲ್ಲರೂ ಅಹೋರಾತ್ರಿ ಪ್ರತಿಭಟನೆ ನಡೆಸಲು ಸಾಧ್ಯವಾಗಿದೆ ಎಂದರು.


ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಕಾರ್ಯದರ್ಶಿ ರಘು ಪಾಳ್ಯ ಮಾತನಾಡಿ.

ಮಲೆನಾಡು ಭಾಗದ ಕಾಡಾನೆ ಹಾವಳಿ ಸಮಸ್ಯೆಯನ್ನು ಹಳ್ಳಿಯಿಂದ ದಿಲ್ಲಿವರೆಗೂ ಮುಟ್ಟಿಸಲು ಮಾಧ್ಯಮದವರ ಪಾತ್ರ ಬಹುದೊಡ್ಡದು ಮುದ್ರಣ ಮಾಧ್ಯಮ ಹಾಗೂ ದೃಶ್ಯ ಮಾಧ್ಯಮದವರು ನಮ್ಮೆಲ್ಲ ಹೋರಾಟಗಳಿಗೆ ಬೆನ್ನೆಲುಬಾಗಿ ನಿಂತಿದ್ದಾರೆ ಎಲ್ಲಾ ಮಾಧ್ಯಮದ ಸ್ನೇಹಿತರಿಗೆ ಧನ್ಯವಾದಗಳು ಅರ್ಪಿಸಿದ್ದಾರೆ.


ಕಾಡಾನೆ ಹಾವಳಿ ಸಂತ್ರಸ್ತರ ಸಮಿತಿಯ ಶಶಿಧರ್ ಹೊಸಗದ್ದೆ ಮಾತನಾಡಿ

ನಮ್ಮ ಭಾಗದ ರೈತರು ಬೆಳೆಗಾರರ ಸಾರ್ವಜನಿಕರ ಪರವಾಗಿ ಹಗಲು ರಾತ್ರಿ ಎನ್ನದೆ ಹೋರಾಟ ನಡೆಸಿದ ಕನ್ನಡಪರ ಸಂಘಟನೆಗಳ ಒಕ್ಕೂಟಕ್ಕೆ ಸಮಸ್ತ ಬೆಳೆಗಾರರ ಪರವಾಗಿ ಅಭಿನಂದನೆ ಸಲ್ಲಿಸುತ್ತಾನೆ ಎಂದಿದ್ದಾರೆ.

RELATED ARTICLES
- Advertisment -spot_img

Most Popular