Saturday, April 19, 2025
Homeಸುದ್ದಿಗಳುಸಕಲೇಶಪುರವಿಧಾನಸೌಧದೊಳಗೇ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ; ಬಿಜೆಪಿ ಯುವ ಮುಖಂಡ ಶರತ್ ವಿರಾಸ್ ಖಂಡನೆ.

ವಿಧಾನಸೌಧದೊಳಗೇ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ; ಬಿಜೆಪಿ ಯುವ ಮುಖಂಡ ಶರತ್ ವಿರಾಸ್ ಖಂಡನೆ.

ವಿಧಾನಸೌಧದೊಳಗೇ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ; ಬಿಜೆಪಿ ಯುವ ಮುಖಂಡ ಶರತ್ ವಿರಾಸ್ ಖಂಡನೆ.

ಸಕಲೇಶಪುರ : ರಾಜ್ಯಸಭಾ ಚುನಾವಣೆಯ (Rajya Sabha Election) ಫಲಿತಾಂಶ ಹೊರಬೀಳುತ್ತಿದ್ದಂತೆ ಕಾಂಗ್ರೆಸ್‌ ಕಾರ್ಯಕರ್ತರ ಸಂತಸ ಮುಗಿಲು ಮುಟ್ಟಿತ್ತು. ಗೆಲುವು ಸಾಧಿಸಿದ ಕಾಂಗ್ರೆಸ್‌ನ ಮೂವರು ಸದಸ್ಯರ ಪೈಕಿ ನಾಸಿರ್ ಹುಸೇನ್ ಬೆಂಬಲಿಗರು ಶತ್ರು ರಾಷ್ಟ್ರ ಪಾಕಿಸ್ತಾನ ಪರ ಜೈಕಾರ ಕೂಗಿ ಉದ್ಧಟತನ ಮೆರೆದಿದ್ದಾರೆ. ನಮ್ಮ ಭಾರತದ ಸೌರ್ವಭೌಮತ್ವವನ್ನು ಧಿಕ್ಕರಿಸಿ ಪಾಕ್‌ ಪರ ಘೋಷಣೆ ಕೂಗಿರುವ ಬಗ್ಗೆ ರಾಜ್ಯ ಸೇರಿ ದೇಶಾದ್ಯಂತ ಭಾರಿ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಇಂಥದ್ದೊಂದು ಪಾಪಿ ಕೃತ್ಯ, ಅಕ್ಷಮ್ಯ ಅಪರಾಧವನ್ನು ವಿಧಾನಸೌಧದೊಳಗೆ ಮಾಡಿರುವುದು ಮತ್ತೊಂದು ದುರಂತವಾಗಿದೆ ಎಂದು ತಾಲೂಕು ಬಿಜೆಪಿಯ ಯುವ ಮುಖಂಡ ಶರತ್ ವಿರಾಸ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಾಸ್ತವ ನ್ಯೂಸ್ ನೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿರುವುದು ನಮ್ಮ ದೇಶ ಹಾಗೂ ಸೈನಿಕರಿಗೆ ಮಾಡಿದ ಅಪಮಾನವಾಗಿದೆ. ಇಂತ ದ್ರೋಹಿಗಳಿಗೆ ಕಾಂಗ್ರೆಸ್ ಪಕ್ಷ ರಕ್ಷಣೆಯಾಗಿ ನಿಂತಿರುವುದು ಖಂಡನೀಯವಾದ್ದು. ಇಂದಿನ ವಿಧಾನಸಭಾ ಅಧಿವೇಶನದಲ್ಲೂ ಸಹ ಕಾಂಗ್ರೆಸ್ ತಮ್ಮ ಚೇಲಾ ಗಳ ಬೆನ್ನಿಗೆ ನಿಂತಿರುವುದು ವಿಪರ್ಯಾಸ.ಕೂಡಲೇ ಪಾಕ್ ಪರ ಘೋಷಣೆ ಕೂಗಿದ ದೇಶ ದ್ರೋಹಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

RELATED ARTICLES
- Advertisment -spot_img

Most Popular