ನೂತನ ನ್ಯಾಯಾಧೀಶರಾಗಿ ಆಯ್ಕೆಯಾದ ಸುರಕ್ಷಾರವರನ್ನು ಅಭಿನಂದಿಸಿದ -ಕಟ್ಟೆಗದ್ದೆ ನಾಗರಾಜ್
ಆಲೂರು: ಹಾಸನದ ಎಂ. ಕೃಷ್ಣ ಲಾ ಕಾಲೇಜಿನ ವಿದ್ಯಾರ್ಥಿನಿ ಆಲೂರು ತಾಲೂಕಿನ ಕೆ. ಹೊಸಕೋಟೆ ಹೋಬಳಿ ಕಿತ್ತಗಳಲೆ ಗ್ರಾಮದ ವಕೀಲೆ ಸುರಕ್ಷಾ ಕೆ.ಕೆ ಅವರು ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿದ ಹಿನ್ನೆಲೆಯಲ್ಲಿ ಸಮಾಜ ಸೇವಕರು ಹಾಗೂ ಬಿಜೆಪಿ ಮುಖಂಡರಾದ ಕಟ್ಟೆಗದ್ದೆ ನಾಗರಾಜ್ ಅಭಿನಂದನೆ ಸಲ್ಲಿಸಿದ್ದಾರೆ.
ಸುರಕ್ಷಾ ರವರು ನ್ಯಾಯಾಧೀಶರಾಗಿ ಆಯ್ಕೆಯಾಗಿರುವುದು ಇಡೀ ಜಿಲ್ಲೆಗೆ ಹೆಮ್ಮೆ ತರುವ ವಿಷಯವಾಗಿದ್ದು. ಹೊಸ್ಕೋಟೆ ಗ್ರಾಮವನ್ನು ಗುರುತಿಸುವಂತಹ ಕೆಲಸ ಮಾಡಿದ್ದಾರೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಜಿಲ್ಲಾ ನ್ಯಾಯಾಧೀಶರಾಗಿ ಉನ್ನತ ಮಟ್ಟದ ಅಧಿಕಾರ ವಹಿಸಲಿ ಜೊತೆಗೆ ಬಡವರಿಗೆ, ನಿರ್ಗತಿಕರಿಗೆ, ದೀನ ದಲಿತರಿಗೆ ಆಶಾಕಿರಣವಾಗಲಿ ಎಂದು ಶುಭ ಹಾರೈಸಿ ಅಭಿನಂದಿಸಲಾಯಿತು.