ಸರ್ಕಾರಿ ದಲಿತ ಅಧಿಕಾರಿಗೆ ಕಿರುಕುಳ ಕಾಂಗ್ರೆಸ್ ಮುಖಂಡ ಮುರಳಿ ಮೋಹನ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ
ಸಕಲೇಶಪುರ : ಸರ್ಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ ತಾನು ಹೇಳಿದಂತೆ ಕೇಳಬೇಕೆಂದು ಕೃಷಿ ಅಧಿಕಾರಿಯೊಬ್ಬರಿಗೆ ಧಮಾಕಿ ಹಾಕಿರುವ ಆಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಸಕಲೇಶಪುರ ತಾಲೂಕಿನ ವಿವಿಧ ದಲಿತ ಸಂಘಟನೆಗಳು ಕಾಂಗ್ರೆಸ್ ಮುಖಂಡ ಮುರುಳಿ ಮೋಹನ್ ವಿರುದ್ಧ ಸೋಮವಾರ ಪ್ರತಿಭಟನೆ ನಡೆಸಿದರು ಪಟ್ಟಣದ ಹೊಳೆ ಮಲ್ಲೇಶ್ವರ ದೇವಾಲಯದಿಂದ ಆರಂಭಗೊಂಡ ಪ್ರತಿಭಟನೆ ಮೆರವಣಿಗೆ ಸಕಲೇಶಪುರದ ಹಳೆ ಬಸ್ ನಿಲ್ದಾಣ ಮೂಲಕ ಸಾಗಿ ಉಪ ವಿಭಾಗಾಧಿಕಾರಿಗಳಿಗೆ ಈತನನ್ನು ತಾಲೂಕಿನಿಂದ ಗಡಿಪಾರು ಮಾಡಬೇಕೆಂದು ಮನವಿ ಪತ್ರ ಸಲ್ಲಿಸಲಾಯಿತು
ಪ್ರತಿಭಟನಾದಾರರನ್ನು ಉದ್ದೇಶಿಸಿ ಮಾತನಾಡಿದ ದಲಿತ ಮುಖಂಡ ದೊಡ್ಡಯ್ಯ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಕಲೇಶಪುರ ಆಲೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮುರಳಿ ಮೋಹನ್ ಕ್ಷೇತ್ರದಲ್ಲಿ ಮೂರನೇ ಸ್ಥಾನ ಗಳಿಸಿದ್ದಾರೆ ಕಳೆದ 5 ವರ್ಷಗಳಿಂದ ಕ್ಷೇತ್ರದಲ್ಲಿರುವ ಇವರು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರುವ ಮುನ್ನ ಎಲ್ಲರ ಜೊತೆ ಹೊಂದಾಣಿಕೆಯಲ್ಲಿ ಇದ್ದರು ಆದರೆ ಇದೀಗ ರಾಜ್ಯ ಸರ್ಕಾರ ನಮ್ಮದೇ ನಾನು ಹೇಳಿದಂತೆ ತಾಲೂಕಿನಲ್ಲಿ ಅಧಿಕಾರಿಗಳು ಕೇಳಬೇಕು ಇಲ್ಲವಾದರೆ ನಿಮ್ಮನ್ನು ವರ್ಗಾವಣೆ ಮಾಡಿಸುತ್ತೇನೆ ಎಂದು ಸರ್ಕಾರಿ ಅಧಿಕಾರಿಗಳಿಗೆ ಕರ್ತವ್ಯ ಮಾಡಲು ಅಡಚಣೆ ಉಂಟು ಮಾಡುತ್ತಿದ್ದಾರೆ ಸಂವಿಧಾನ ಬದ್ಧವಾಗಿ ಕ್ಷೇತ್ರದಲ್ಲಿ ಆಯ್ಕೆ ಆಗಿರುವ ಶಾಸಕರಿಗಿಂತ ನಾನೇ ಪ್ರಭಾವಶಾಲಿ ಎಂದು ಅಧಿಕಾರಿಗಳಿಗೆ ಭಯ ಹುಟ್ಟಿಸಿದ್ದು ಈ ಹಿಂದೆ ಪುರಸಭೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮುಖ್ಯ ಅಧಿಕಾರಿ l ಜಯಣ್ಣ ಎಂಬುವರಿಗೆ ಕಿರುಕುಳ ನೀಡಿ ತಾಲೂಕಿನಿಂದ ವರ್ಗಾವಣೆ ಮಾಡಲಾಗಿದೆ.ಇದಲ್ಲದೆ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಮನೆಗೆ ಕರೆದಾಗ ಬರಲಿಲ್ಲ ಎಂಬ ಕಾರಣ ನೀಡಿ ಅವರನ್ನು ಸಹ ವರ್ಗಾವಣೆ ಮಾಡಲಾಗಿತ್ತು ಆ ವ್ಯಕ್ತಿ ವರ್ಗಾವಣೆ ಹಿನ್ನೆಲೆಯಲ್ಲಿ ಕೋರ್ಟಿಗೆ ಹಾಜರಾಗುವಾಗ ಅಪಘಾತವಾಗಿ ಮೃತಪಟ್ಟಿರುತ್ತಾರೆ ಇದಕ್ಕೆಲ್ಲ ನೇರ ಕಾರಣ ಮುರಳಿ ಮೋಹನ್ ಆಗಿದ್ದು ಇವರ ವಿರುದ್ಧ ಜಿಲ್ಲಾ ಕಾಂಗ್ರೆಸ್ ಕಠಿಣ ಕ್ರಮ ತೆಗೆದುಕೊಳ್ಳಬೇಕು ಇಲ್ಲವಾದಲ್ಲಿ ಕಾಂಗ್ರೆಸ್ ಪಕ್ಷವನ್ನು ನೆಚ್ಚಿಕೊಂಡಿರುವ ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತರಿಗೆ ಸಮಸ್ಯೆ ಆಗುತ್ತದೆ ಪ್ರತಿಭಟನೆ ಹತ್ತಿಕ್ಕಲು ತನ್ನ ಬೆಂಬಲಿಗರ ಮೂಲಕ ಸ್ಟೀವನ್ ಪ್ರಕಾಶ್ ಮೇಲೆ ಹಲ್ಲೆ ನಡೆಸಲು ಯತ್ನಿಸಿದರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದರು ಪಟ್ಟಣದ ಪೊಲೀಸರು ಕಾನೂನು ಪರವಾಗಿ ವರ್ತಿಸಲಿಲ್ಲ ಈ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಈ ಬಗ್ಗೆ ದೂರು ನೀಡಲಾಗುವುದು ಎಂದು ತಿಳಿಸಿದರು. ಇದೆ ಮುರುಳಿ ಮೋಹನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ದಲಿತ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸದಸ್ಯರು ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ವೇಳೆ ಮುಖಂಡರಾದ ವೀರೇಶ್, ವಳಲಹಳ್ಳಿ ವೀರೇಶ್ , ಹೆತ್ತೂರು ದೊಡ್ಡಯ್ಯ,ಸ್ಟೀವನ್ ಪ್ರಕಾಶ್, ಆಚಂಗಿ ದೇವರಾಜ್ ಮಳಲಿ ಶಿವಣ್ಣ,, ರಾಜಶೇಖರ್ ದೇವಲಕೆರೆ, ಧರ್ಮ, ವಿರೂಪಾಕ್ಷ ಇತರ ಪ್ರಮುಖ ದಲಿತ ಮುಖಂಡರು ಉಪಸಿತರಿದ್ದರು