ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಒತ್ತು-ಶಾಸಕ ಸಿಮೆಂಟ್ ಮಂಜುನಾಥ್
ಸಕಲೇಶಪುರ : ಕ್ಷೇತ್ರದಲ್ಲಿನ ಗ್ರಾಮೀಣ ಪ್ರದೇಶದ ರಸ್ತೆಗಳು ಇನ್ನೂ ಸಹ ದುಸ್ಥಿತಿಯಲ್ಲಿದ್ದು, ಹಂತ ಹಂತವಾಗಿ ಕ್ರಿಯಾ ಯೋಜನೆ ತಯಾರಿಸಿ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಶಾಸಕ ಸಿಮೆಂಟ್ ಮಂಜುನಾಥ್ ಹೇಳಿದರು.
ಇತ್ತೀಚಿಗೆ ತಾಲೂಕಿನ ಉದೇವಾರ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಾಳುಗೋಡು(ದಿಣ್ಣೆಕೆರೆ) ರಸ್ತೆ ಗ್ರಾಮದಲ್ಲಿ ಎಸ್‌ಇಪಿ ಯೋಜನೆಯಡಿ ಪರಿಶಿಷ್ಟ ಜಾತಿಯ ಹೊಸ ಬಡಾವಣೆಯಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸುತ್ತಿರುವ ಸಿಸಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.ನಂತರ ಮಾತಾನಾಡಿದ ಅವರು
ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆಗಳು ಅಭಿವೃದ್ಧಿಯಾದರೆ ಅದು ಪ್ರಗತಿಯ ಸಂಕೇತವಾಗಿದ್ದು, ನಾಗರಿಕರ ಸಂಚಾರಕ್ಕೆ ಅಗತ್ಯವಾಗಿದೆ.ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಎಸ್‌ಇಪಿ, ಟಿಎಸ್‌ಪಿ ಯೋಜನೆಯಡಿ ಪ.ಜಾತಿ ಹಾಗೂ ಪ.ಪಂಗಡದವರು ವಾಸಿಸುವ ಬಡಾವಣೆ ಗಳಲ್ಲಿ ರಸ್ತೆ, ಚರಂಡಿಗಳನ್ನು ಅಭಿವೃದ್ಧಿಪಡಿಸಲಾಗಿದ್ದು ಅಗತ್ಯವಿರುವೆಡೆ ಅಭಿವೃದ್ಧಿ ಪಡಿಸಲಾಗುವುದೆಂದು ತಿಳಿಸಿದರು.ಗ್ರಾಮಾಂತರ ಪ್ರದೇಶದಲ್ಲಿ ಅಭಿವೃದ್ಧಿ ಯಾಗಿಲ್ಲದ ಮತ್ತು ವಾಹನ, ಸಾರ್ವಜನಿಕ ಸಂಚಾರಕ್ಕೆ ಯೋಗ್ಯವಲ್ಲ ರಸ್ತೆಗಳ ಮಾಹಿತಿ ಪಡೆದುಕೊಂಡಿದ್ದು, ಶೀಘ್ರದಲ್ಲೇ ಹಂತ ಹಂತವಾಗಿ ಅಭಿವೃದ್ಧಿಗೆ ಚಾಲನೆ ನೀಡಲಾಗುವುದು ಎಂದು ಶಾಸಕರು ತಿಳಿಸಿದರು.ಕಾಮಗಾರಿ ನಿರ್ವಹಿಸುತ್ತಿರುವ ಎಂಜಿನಿಯರ್, ಗುತ್ತಿಗೆದಾರರು ಗುಣಮಟ್ಟದಿಂದ ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚಿಸಿದರು.
ಈ ಸಂಧರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಆನಂದ್ ಮೂರ್ತಿ ಸೇರಿದಂತೆ ಗ್ರಾಮ ಪಂಚಾಯಿತಿಯ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು