ಸಕಲೇಶಪುರ ಎನ್ .ಡಿ.ಎ. ಅಭ್ಯರ್ಥಿ ಚುನಾವಣಾ ಚಿಹ್ನೆ ಯಾವುದಿರುತ್ತದೆ ಎನ್ನುವ ಕಾಂಗ್ರೆಸ್ ನಾಯಕರ ವ್ಯಂಗ್ಯಕ್ಕೆ ಪ್ರತಿಯಾಗಿ ಸಂಸದ, ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ, ಜೆಡಿಎಸ್ ಪಕ್ಷದ ಚಿಹ್ನೆಯಾದ ತೆನೆಹೊತ್ತ ಮಹಿಳೆಗೆ ಕಮಲ ಎಂದು ಪುನರ್ಚಾರಿಸಿದ್ದಾರೆ.
ನೆನ್ನೆ ನಗರದಲ್ಲಿ ನಡೆದ ರೋಡ್ ಶೋ ವೇಳೆ ಕಾರ್ಯಕರ್ತರು ಉದ್ದೇಶಿಸಿ ಮಾತನಾಡಿದರು.ಕೆಲವರು ಚುನಾವಣೆಯಲ್ಲಿ ಚಿಹ್ನೆ ಯಾವುದಿರುತ್ತೆ ಎಂದು ಕೇಳ್ತಿದ್ದರು. ಅಲ್ಲಿ ತೆನೆ ಹೊತ್ತ ಮಹಿಳೆ ಚಿಹ್ನೆ ಇರುತ್ತಾ? ಇಲ್ಲಾ ಕಮಲ ಇರುತ್ತಾ? ಅಂದಿದ್ದಾರೆ. ಯಾರಿಗೂ ಅನುಮಾನ, ಗೊಂದಲ ಬೇಡ. ಅಲ್ಲಿ ತೆನೆ ಹೊತ್ತ ಮಹಿಳೆ ಚಿಹ್ನೆ ಇರುತ್ತದೆ.
ಗೊಂದಲ ಬಗೆಹರಿಸಲು ಒಂದು ತಂತ್ರ ಮಾಡಿದ್ದೇವೆ. ತೆನೆ ಹೊತ್ತ ಮಹಿಳೆ ನಮ್ಮ ಚಿಹ್ನೆ, ಆ ಮಹಿಳೆ ಹೆಸರು ಕಮಲ. ತೆನೆ ಹೊತ್ತ ಮಹಿಳೆಗೆ ಕಮಲ ಎಂದು ಹೊಸದಾಗಿ ನಾಮಕರಣ ಮಾಡಿದ್ದೇವೆ ಎಂದರು.
ಕಾರ್ಯಕ್ರಮದ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿರುವ ಬಿಜೆಪಿ ಯುವ ಶರತ್ ವಿರಾಸ್, ನಿನ್ನೆ ಕಾರ್ಯಕ್ರಮ ಯಶಸ್ವಿಯಾಗಿದ್ದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರಣ್ಣ ಹಾಗೂ ಶಾಸಕ ಸಿಮೆಂಟ್ ಮಂಜು ನೇತೃತ್ವದಲ್ಲಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ NDA ಅಭ್ಯರ್ಥಿಯನ್ನು ಹೆಚ್ಚು ಮತಗಳನ್ನು ಪಡೆಯುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ತಿಳಿದಿದ್ದಾರೆ. ನೆನ್ನೆಯ ರೋಡ್ ಶೋ ಹೆಚ್ಚು ಗಮನ ಸೆಳೆದಿದ್ದು ವಿಜಯೇಂದ್ರಣ್ಣನವರ ಜನಪ್ರಿಯತೆಗೆ ಸಾಕ್ಷಿಯಾಗಿದೆ ಎಂದಿದ್ದಾರೆ.