Wednesday, April 2, 2025
Homeಸುದ್ದಿಗಳುಸಕಲೇಶಪುರಸಮಸ್ಯೆ ಹೋಗಲಾಡಿಸಲು ಸಂಘಟನೆ ಹೋರಾಟ ಅಗತ್ಯ - ಶಾಸಕ ಸಿಮೆಂಟ್ ಮಂಜು.

ಸಮಸ್ಯೆ ಹೋಗಲಾಡಿಸಲು ಸಂಘಟನೆ ಹೋರಾಟ ಅಗತ್ಯ – ಶಾಸಕ ಸಿಮೆಂಟ್ ಮಂಜು.

ಸಮಸ್ಯೆ ಹೋಗಲಾಡಿಸಲು ಸಂಘಟನೆ ಹೋರಾಟ ಅಗತ್ಯ – ಶಾಸಕ ಸಿಮೆಂಟ್ ಮಂಜು.

ಆಲೂರು :ನಮಗೆ ದೊರೆಯಬೇಕಾದ ಹಕ್ಕುಗಳನ್ನು ಪಡೆಯಲು ಹಾಗೂ ಎದುರಿಸುತ್ತಿರುವ ಸಮಸ್ಯೆಗಳನ್ನು ಹೋಗಲಾಡಿಸಲು ಸಂಘಟನೆ ಹೋರಾಟ ಅಗತ್ಯ ಎಂದು ಶಾಸಕ ಸಿಮೆಂಟ್ ಹೇಳಿದರು.

ಗುರುವಾರ ತಾಲೂಕಿನ ಸಂಕಲಾಪುರ ಗ್ರಾಮದಲ್ಲಿ ಕರ್ನಾಟಕ ರಾಜ್ಯ ಬೆಳೆಗಾರರ ಒಕ್ಕೂಟ, ಹಾಸನ ಜಿಲ್ಲಾ ಪ್ಲಾಂಟರ್ಸ್ ಸಂಘ, ಆಗುರು ತಾಲೂಕು ಕಾಫಿ ಬೆಳೆಗಾರರ ಸಂಘ ಮತ್ತು ಪ್ರಕೃತಿ ಸಣ್ಣ ಕಾಫಿ ಬೆಳೆಗಾರರ  ಸಂಘದ ವತಿಯಿಂದ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಕಳೆದ ಎರಡೂವರೆ ದಶಕದಿಂದ ಈ ಭಾಗದಲ್ಲಿ ಕಾಡಾನೆ ಸಮಸ್ಯೆ ನಿರಂತರವಾಗಿದೆ. ಜೀವ, ಬೆಳೆ ಹಾಗೂ ಆಸ್ತಿಪಾಸ್ತಿ ಹಾನಿಯಾಗುತ್ತಿದೆ. ಆ ನಿಟ್ಟಿನಲ್ಲಿ ಈಗಾಗಲೆ ಬೆಳೆಗಾರರ ಸಂಘಟನೆಯೊಂದಿಗೆ ಅರಣ್ಯ ಸಚಿವರನ್ನು ಭೇಟಿಯಾಗಿ ಸಮಸ್ಯೆ ಗಂಭೀರತೆಯನ್ನು ತಿಳಿಸಲಾಗಿದೆ. ಕಾಫಿ ಬೆಳೆಗಾರರ ಸಂಘಟನೆ ಹೆಚ್ಚು ಬಲ ಹೊಂದಿದ್ದು, ಸಂಘಟನೆಯ ಶಕ್ತಿ ಹಾಗೂ ಶಾಸಕನಾಗಿ ಅಧಿಕಾರ ಬಳಸಿ ಸರ್ಕಾರದ ಮೇಲೆ ಹೆಚ್ಚು ಒತ್ತಡ ತಂದು ಬೆಳೆಗಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರಕ್ಕೆ ಮುಂದಾಗುತ್ತೇನೆ’ ಎಂದರು.ರಾಜ್ಯ ಬೆಳೆಗಾರರ ಒಕ್ಕೂಟ, ಹಾಸನ ಜಿಲ್ಲಾ ಪ್ಲಾಂಟರ್ಸ್‌ ಸಂಘ, ಹೋಬಳಿ ಬೆಳೆಗಾರರ ಸಂಘಟನೆಗಳು ಹೆಚ್ಚು ಕ್ರಿಯಾತ್ಮಕವಾಗಿ ಬೆಳೆಗಾರರ ಪರ ಧ್ವನಿಯಾಗಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಅಧಿಕಾರಿಗಳು ಸಾರ್ವಜನಿಕರು ಕೆಲಸ ಕಾರ್ಯಗಳಿಗಾಗಿ ಕಚೇರಿಗೆ ಬಂದರೆ, ಅವರನ್ನು ಕೂರಿಸಿ, ಗೌರವದಿಂದ ನಡೆಸಿಕೊಳ್ಳುವ ಜತೆಗೆ, ತ್ವರಿತವಾಗಿ ಅವರ ಕೆಲಸ ಕಾರ್ಯಗಳನ್ನು ಮಾಡಿಕೊಡಬೇಕು ಎಂದು ಸೂಚನೆ ನೀಡಲಾಗಿದೆ’ ಎಂದರು. ವಿಧಾನಸಭಾ ಅಧಿವೇಶನದಲ್ಲಿ ನನಗೆ ಸಿಕ್ಕಂತ ಸಮಯದಲ್ಲಿ ಕ್ಷೇತ್ರದ ರೈತರು ಬೆಳೆಗಾರರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರಲು ಪ್ರಾಮಾಣಿಕವಾಗಿ ಪ್ರಯತ್ನಿಸಿದ್ದೇನೆ. ನಾನು ಕೂಡ ಒಬ್ಬ ಸಣ್ಣ ಬೆಳೆಗಾರನಾಗಿ ಬೆಳೆಗಾರರ ನೋವು ನಲಿವುಗಳು ತಿಳಿದಿದೆ. ಇತ್ತೀಚಿನ ದಿನಗಳಲ್ಲಿ ಹವಾಮಾನ ವೈಪರಿತದಿಂದ ರೈತರು ಹಾಗೂ ಬೆಳೆಗಾರರು ಸಾಕಷ್ಟು ಸಮಸ್ಯೆಗಳನ್ನು 

 ಎದುರಿಸುತ್ತಿರುವುದು ನನ್ನ ಗಮನಕ್ಕೆ ಬಂದಿದ್ದು ಮುಂದಿನ ದಿನಗಳಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಿ ಬೆಳೆಗಾರರ ಪರವಾಗಿ ಧ್ವನಿ ಎತ್ತುತ್ತೇನೆ ಎಂದರು.

 ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಸಂಕ್ಲಾಪುರ ಹಾಗೂ ಕಲ್ಮಠದ ಪೀಠಾಧ್ಯಕ್ಷರಾದ ಧರ್ಮರಾಜೇಂದ್ರ ಸ್ವಾಮಿಗಳು ವಹಿಸಿದ್ದರು.

 ಈ ಸಂದರ್ಭದಲ್ಲಿ ಸಂಕಲಾ ಪುರ ವೃತ್ತದ ಪ್ರಕೃತಿ ಸಣ್ಣ ಕಾಫಿ ಬೆಳೆಗಾರರ ಸಂಘದ ಅಧ್ಯಕ್ಷ ಶಶಿಧರ್, ಕರ್ನಾಟಕ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಶಿವಣ್ಣ, ಹಾಸನ ಜಿಲ್ಲಾ ಪ್ಲಾಂಟರ್ಸ್ ಸಂಘದ ಅಧ್ಯಕ್ಷ ಪರಮೇಶ್, ದೇವರಾಜ್ ಅರಸು ಅಭಿವೃದ್ಧಿ ನಿಗಮದ ನಿರ್ದೇಶಕರಾದ ಕಾಂತರಾಜ್, ಕರ್ನಾಟಕ ಬೆಳೆಗಾರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸುರೇಂದ್ರ, ಹಾಸನ ಜಿಲ್ಲಾ ಪ್ಲಾಂಟರ್ಸ್ ಸಂಘದ ಗೌರವ ಕಾರ್ಯದರ್ಶಿ ಲೋಹಿತ್ ಕೌಡಳ್ಳಿ, ಆಲೂರು ತಾಲೂಕು ಬೆಳೆಗಾರರ ಸಂಘದ ಅಧ್ಯಕ್ಷ ರವಿಕುಮಾರ್, ಬೆಳೆಗಾರರ ನಿಂಗರಾಜು, ಮಂಜಗೋಡು ದೀಪು ಸೇರಿದಂತೆ ಪ್ರಕೃತಿ ಸಣ್ಣ ಬೆಳೆಗಾರರ ಸಂಘದ ಪದಾಧಿಕಾರಿಗಳು, ಬೆಳೆಗಾರರು, ಗ್ರಾಮಸ್ಥರು ಉಪಸ್ಥಿತರಿದ್ದರು.

RELATED ARTICLES
- Advertisment -spot_img

Most Popular