ಎಸ್.ಎಸ್.ಎಲ್.ಸಿ ಫಲಿತಾಂಶ : ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಉತ್ಸವ್ ಪಟೇಲ್ ನನ್ನು ಅಭಿನಂದಿಸಿದ ಶಾಸಕ ಸಿಮೆಂಟ್ ಮಂಜು
ಹಾಸನ : ಇತ್ತೀಚೆಗೆ ಪ್ರಕಟವಾದ ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಉತ್ಸವ್ ಪಟೇಲ್ ನನ್ನು ಭಾನುವಾರ ಅವರ ಮನೆಗೆ ಭೇಟಿ ನೀಡಿದ ಶಾಸಕ ಶಾಸಕ ಸಿಮೆಂಟ್ ಮಂಜು ಅಭಿನಂದಿಸಿದರು.
ಈ ಬಾರಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಡಿ. ಟಿ ಪ್ರಕಾಶ್ ಆಶಾ ರಾಣಿ ದಂಪತಿಗಳ ಪುತ್ರ ನಗರದ ವಿಜಯ ಸ್ಕೂಲ್ ವಿದ್ಯಾರ್ಥಿ ಉತ್ಸವ್ ಪಟೇಲ್ 625 ಕ್ಕೆ 625 ಅಂಗ ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾನೆ.
ಜಿಲ್ಲೆಗೆ ಕೀರ್ತಿ ತಂದಿರುವ ವಿದ್ಯಾರ್ಥಿಯ ಸಾಧನೆಗೆ ಕಾರಣರಾದ ಪಾಠ ಬೋಧಿಸಿದ ಶಿಕ್ಷಕರು, ಶಾಲಾ ಆಡಳಿತ ಮಂಡಳಿ ಹಾಗೂ ಪೋಷಕರಿಗೆ ಅಭಿನಂದಿಸಿ,ಉತ್ಸವ್ ಪಟೇಲ್ ಮುಂದಿನ ಶೈಕ್ಷಣಿಕ ಪ್ರಗತಿ ಉತ್ತಮವಾಗಿರಲಿ ಎಂದು ಶುಭ ಹಾರೈಸಿದರು.