Sunday, November 24, 2024
Homeಸುದ್ದಿಗಳುಸಕಲೇಶಪುರ : ರಾಷ್ಟ್ರಕವಿ ಕುವೆಂಪು ಅವರ ವಿಶ್ವಮಾನವ ಸಂದೇಶ ಎಲ್ಲಾ ಕಾಲಕ್ಕೂ ಪ್ರಸ್ತುತವಾಗಿದೆ ಎಂದು ಎವಿಕೆ...

ಸಕಲೇಶಪುರ : ರಾಷ್ಟ್ರಕವಿ ಕುವೆಂಪು ಅವರ ವಿಶ್ವಮಾನವ ಸಂದೇಶ ಎಲ್ಲಾ ಕಾಲಕ್ಕೂ ಪ್ರಸ್ತುತವಾಗಿದೆ ಎಂದು ಎವಿಕೆ ಕಾಲೇಜಿನ ಉಪನ್ಯಾಸಕರಾದಡಾ ಸಿ ಚ ಯತೀಶ್ವರ ರವರು ಹೇಳಿದರು.

 

ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಮತ್ತು ಕುಡುಗರಹಳ್ಳಿ ಪ್ರಥಮ ಕಾಲೇಜ್ ಸಹಯೋಗದಲ್ಲಿ ನಡೆದ ಕುವೆಂಪು ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ಕುವೆಂಪು ಅವರು ಪುರೋಹಿತ ವರ್ಗದವರ ಬಗ್ಗೆ ಸದಾ ಎಚ್ಚರಿಕೆಯಿಂದ ಇರಬೇಕು ಮತ್ತು ಯುವ ಸಮುದಾಯ ಇಂತವರಿಂದ ದೂರವೇ ಇರಬೇಕು ಎಂದರು.
ಕುವೆಂಪು ಅವರು ಮಾನವ ಕುಲಕ್ಕೆ ನೀಡಿದ ಮಾರ್ಗದರ್ಶನ/ಆದರ್ಶಗಳು ಸಾರ್ವಕಾಲಿಕ. ಕನ್ನಡಕ್ಕೆ ಹೊಸ ನುಡಿಗಟ್ಟು ಹಾಗೂ ಹೊಸ ಕಲ್ಪನೆಗಳನ್ನು ನೀಡಿ ಹೊಸಗನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ ಧೀಮಂತ ಸಾಹಿತಿ. ‘ಮನುಜ ಮತ ವಿಶ್ವಪಥ’ ಸಂದೇಶ ಸಾರಿದ ಶ್ರೇಷ್ಠ ವಿಶ್ವಮಾನವ. ಅಂತಹ ಮಹಾನ್ ಚೇತನ ಕುವೆಂಪ, ಕುವೆಂಪು ಯಾವುದೇ ಜಾತಿಗೆ ಸೇರಿದವರಲ್ಲದವರು. ವೈಚಾರಿಕ ಪ್ರಜ್ಞೆಯೊಂದಿಗೆ ಪೂರ್ಣ ಅರಳಿದ ಬದುಕು ಅವರದಾಗಿತ್ತು. ಅನುಭವದ ಆಳಕ್ಕೆ ಇಳಿದು ಕವಿಯಾಗಿ ಜಗತ್ತಿಗೆ ವಿಚಾರಧಾರೆಗಳನ್ನು ಹಂಚುವ ಮೂಲಕ ವಿಶ್ವಕ್ಕೆ ಉತ್ತಮ ಸಂದೇಶಗಳನ್ನು ನೀಡಿದರು. ಕುವೆಂಪು ಅವರ ವಿಶ್ವ ಮಾನವ ಸಂದೇಶ. ಯಾವುದೇ ಭೇಧ- ಭಾವ ತೋರದೇ ಪ್ರತಿಯೊಬ್ಬರಿಗೂ ಶಿಕ್ಷಣವನ್ನು ನೀಡುವ ಮೂಲಕ ವಿದ್ಯೆಯಿಂದ ಅಲ್ಪ ಮಾನವ ನನ್ನು ವಿಶ್ವ ಮಾನವರನ್ನಾಗಿ ಮಾಡಲು ಸಾಧ್ಯವಿದ್ದು, ಎಲ್ಲಾ ಶಾಲಾ- ಕಾಲೇಜುಗಳಲ್ಲಿ ಪ್ರತಿ ನಿತ್ಯ ಕುವೆಂಪು ಅವರ ಸಂದೇಶಗಳು ಎಲ್ಲಾ ವಿದ್ಯಾರ್ಥಿ ಗಳಿಗೂ ತಲುಪಬೇಕು ಎಂದರು.


ಇದೇ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಪ್ರೌಢಶಾಲಾ ಮಕ್ಕಳಿಗೆ ಅಯೋಜನೆ ಮಾಡಿದ್ದ ಕನ್ನಡ ನಾಡು ನುಡಿ ಪ್ರಭಂದ ಪರೀಕ್ಷೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು

ಈ ಸಂದರ್ಭದಲ್ಲಿ ರಂಗಕರ್ಮಿ ಪ್ರಸಾದ್ ರಕ್ಷಿದಿ, ಕಸಾಪ ತಾಲ್ಲೂಕು ಅಧ್ಯಕ್ಷೆ ಶಾರದ ಗುರುಮೂರ್ತಿ, ಪುರಸಭ ಸದಸ್ಯ ಉಮೇಶ್ ಪ್ರಾಂಶುಪಾಲರಾದ ಡಾ. ಹರೀಶ್, ಉಪನ್ಯಾಸಕರಾದ ಕುಮಾರ್, ಅಶೋಕ್ ಇನ್ನಿತರರು ಉಪಸ್ಥಿತರಿದ್ದರು

RELATED ARTICLES
- Advertisment -spot_img

Most Popular