ಹಾಸನ ಜಿಲ್ಲಾ ಬಂಟರ ಸಂಘದ ಅಧ್ಯಕ್ಷರಾಗಿ ಸಂಜೀತ್ ಶೆಟ್ಟಿ ಆಯ್ಕೆ
ಹಾಸನ : ಜಿಲ್ಲಾ ಬಂಟರ ಸಂಘದ ಜಿಲ್ಲಾ ಅಧ್ಯಕ್ಷರಾಗಿ ಖ್ಯಾತ ಉದ್ಯಮಿ ಸಂಜೀತ್ ಶೆಟ್ಟಿ ರವರು ಸರ್ವಾನುಮತದಿಂದ ಆಯ್ಕೆಯಾದರು.
ಜಿಲ್ಲಾ ಬಂಟರ ಸಂಘದ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದ ಇವರನ್ನು ನೆನ್ನೆ ನೆಡೆದ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಎಲ್ಲ ನಿರ್ದೇಶಕರ ಸಹಮತದೊಂದಿಗೆ ಮುಂದಿನ ಅವಧಿಗೆ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು.
ಶೆಟ್ಟಿ ಅವರು ಹಿಂದೆ ಜಿಲ್ಲಾ ಲಯನ್ಸ್ ರಾಜ್ಯಪಾಲರಾಗಿ ಹಲವಾರು ಸಮಾಜಮುಖಿ ಕಾರ್ಯಗಳನ್ನು ಕೈಗೊಂಡಿದ್ದರು.
ಇವರ ಅಧ್ಯಕ್ಷರ ಅವಧಿಯಲ್ಲಿ ಹಾಸನ ಜಿಲ್ಲಾ ಬಂಟರ ಸಂಘದಿಂದ ಉತ್ತಮ ಕಾರ್ಯಗಳು ರೂಪುಗೊಳ್ಳಲಿ ಎಂದು ಎಲ್ಲರೂ ಶುಭ ಹಾರೈಸಿದ್ದಾರೆ.
ನೂತನ ಅಧ್ಯಕ್ಷರಿಗೆ ಶುಭ ಹಾರೈಸುವ
ಹರೀಶ್ ರೈ ಜಮ್ಮನಹಳ್ಳಿ