ಶಿಕ್ಷಣ, ಉದ್ಯೋಗದಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಮೀಸಲು ಹೆಚ್ಚಳ ಸುಗ್ರೀವಾಜ್ಞೆ ಮೂಲಕ ಜಾರಿಗೆ ನಿರ್ಧರಿಸಿದ್ದು, ಇಷ್ಟರಲ್ಲೇ ಅನುಷ್ಠಾನಕ್ಕೆ ಬರಲಿದೆ ಎಂದು ಸಾರಿಗೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿದರು.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನು ರೀತಿಯಲ್ಲಿ ಕ್ರಮಕೈಗೊಂಡು ಷೆಡ್ಯೂಲ್ 9ಕ್ಕೆ ಸೇರಿಸಲು ಕೇಂದ್ರ ಶಿಫಾರಸ್ಸು ಮಾಡಲಿದ್ದು, ರಾಜ್ಯ ಪತ್ರದಲ್ಲಿ ಪ್ರಕಟವಾದ ತಕ್ಷಣ ಮೀಸಲು ಏರಿಕೆ ಸೌಲಭ್ಯ ಪಡೆಯಲು ಎಸ್ಸಿ, ಎಸ್ಟಿ ಸಮುದಾಯದವರಿಗೆ ಅವಕಾಶವಾಗಲಿದೆ ಎಂದರು.ನ್ಯಾಯಮೂರ್ತಿ ಎಚ್.ಎನ್ ನಾಗಮೋಹನ್ ದಾಸ್ ಆಯೋಗದ ವರದಿಯನ್ನು ರಾಜ್ಯ ಸರ್ಕಾರ ಅಂಗೀಕರಿಸಿ, ಎಸ್ ಸಿ ಮೀಸಲು ಪ್ರಮಾಣ ಶೇ.15 ರಿಂದ 17 ಹಾಗೂ ಎಸ್ ಟಿ ಮೀಸಲು ಪ್ರಮಾಣ ಶೇ.3 ರಿಂದ 7ಕ್ಕೆ ಏರಿಸಲು ನಿರ್ಧರಿಸಿದ್ದು, ವಿಶೇಷ ಸಚಿವ ಸಂಪುಟ ಸಭೆಯ ಅನುಮೋದನೆಯನ್ನು ಪಡೆದುಕೊಂಡಿದೆ.