ಶಿರಾಡಿ ಘಾಟ್ ರಸ್ತೆ: ವಾರದಲ್ಲಿ ಸಮಗ್ರ ಪರಿಹಾರ.
ಮಂಗಳೂರು: ಶಿರಾಡಿ ಘಾಟ್ ರಸ್ತೆಗೆ ಶಾಶ್ವತ ಪರಿಹಾರ ನೀಡಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರೊಂದಿಗೆ ಈ ವಾರದಲ್ಲಿ ವಿಶೇಷ ಸಭೆ ಕರೆದು ಚರ್ಚಿಸಿ ಸಮಗ್ರ ಪರಿಹಾರ ಒದಗಿಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಡಾಂಬರೀಕರಣ, ವೈಟ್ ಟಾಪಿಂಗ್ ಹಾಗೂ ಸುರಂಗ ಮಾಡುವ ಬಗ್ಗೆ ಸಮಗ್ರವಾಗಿ ಈ ವಾರದಲ್ಲಿ ಚರ್ಚಿಸಿ ಪರಿಹಾರ ಒದಗಿಸಿಕೊಡಲಾಗುವುದು ಸುದ್ದಿಗಾರರಿಗೆ ತಿಳಿಸಿದರು. ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಮಹಾರಾಷ್ಟ್ರಕ್ಕೆ ರಾಜ್ಯದ ಬಸ್ಸುಗಳು ಓಡಾಡುತ್ತಿವೆ. ಡಿ.14 ರಂದು ಕೇಂದ್ರ ಗೃಹ ಸಚಿವರು ಎರಡೂ ರಾಜ್ಯಗಳ ಸಿಎಂಗಳು ಭಾಗವಹಿಸಲಿದ್ದೇವೆ ಎಂದರು.