Thursday, June 12, 2025
Homeಸುದ್ದಿಗಳುಹಾಸನ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸಿದ್ದೇಶ್ ನಾಗೇಂದ್ರ ಆಯ್ಕೆ 

ಹಾಸನ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸಿದ್ದೇಶ್ ನಾಗೇಂದ್ರ ಆಯ್ಕೆ 

ಹಾಸನ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸಿದ್ದೇಶ್ ನಾಗೇಂದ್ರ ಆಯ್ಕೆ 

ಹಾಸನ : ಬಿಜೆಪಿ ಪಕ್ಷದ ಸಂಘಟನಾ ಪರ್ವ ದೇಶದಾದ್ಯಂತ ನಡೆಯುತ್ತಿದ್ದು ಇದರ ಮುಂದುವರೆದ ಭಾಗವಾಗಿ ಕರ್ನಾಟಕ ಬಿಜೆಪಿಯು 10 ಜಿಲ್ಲೆಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿದೆ. ಈ ಕುರಿತು ಅಧಿಕೃತ ಪ್ರಕಟಣೆಯನ್ನು ಚುನಾವಣಾಧಿಕಾರಿ ಕ್ಯಾ. ಗಣೇಶ್ ಕಾರ್ಣಿಕ್ ಅವರು ಹೊರಡಿಸಿದ್ದು ಅದರಂತೆ ಹಾಸನ ಜಿಲ್ಲೆಯ ನೂತನ ಅಧ್ಯಕ್ಷರಾಗಿ ಸಿದ್ದೇಶ್ ನಾಗೇಂದ್ರ ಅವರನ್ನು ನೇಮಕ ಮಾಡಲಾಗಿದೆ.

ದೇಶದಾದ್ಯಂತ ಪಕ್ಷದ ಸಂಘಟನಾ ಪರ್ವ 2024-25 ನಡೆಯುತ್ತಿದ್ದು, ಇದರ ಅಂಗವಾಗಿ ರಾಜ್ಯದಲ್ಲಿ ಎರಡನೇ ಹಂತದಲ್ಲಿ ಉಳಿದಿರುವ 10 ಸಂಘಟನಾತ್ಮಕ ಜಿಲ್ಲಾ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಮುಗಿಸಲಾಗಿದೆ. ಆಯ್ಕೆಯಾದ ಹತ್ತು ನೂತನ ಅಧ್ಯಕ್ಷರಿಗೆ ಚುನಾವಣಾಧಿಕಾರಿ ಕ್ಯಾ.ಗಣೇಶ್ ಕಾರ್ಣಿಕ್ ಅಭಿನಂದನೆ ಸಲ್ಲಿಸಿದ್ದಾರೆ.

ನೂತನ ಅಧ್ಯಕ್ಷರ ವಿವರ:

ಉಡುಪಿ – ಕುತ್ಯಾರು ನವೀನ್ ಶೆಟ್ಟಿ

ಮೈಸೂರು ಗ್ರಾಮಾಂತರ – ಕೆಎನ್ ಸುಬ್ಬಣ್ಣ

– ಹಾಸನ – ಸಿದ್ದೇಶ್ ನಾಗೇಂದ್ರ

ಕೊಡಗು – ರವಿ ಕಾಳಪ್ಪ

ದಾವಣಗೆರೆ – ಎನ್ ರಾಜಶೇಖರ

ಹಾವೇರಿ – ವಿರೂಪಾಕ್ಷಪ್ಪ ಬಳ್ಳಾರಿ

ಚಿತ್ರದುರ್ಗ – ಕೆ.ಟಿ. ಕುಮಾರಸ್ವಾಮಿ

ತುಮಕೂರು – ಎಚ್.ಎಸ್. ರವಿಕುಮಾರ್ (ಹೆಬ್ಬಾಕ)

ಮಧುಗಿರಿ – ಚಿದಾನಂದ ಗೌಡ-

ಚಿಕ್ಕಬಳ್ಳಾಪುರ – ಎಸ್.ವಿ. ರಾಮಚಂದ್ರ ಗೌಡ (ಸೀಕಲ್)

RELATED ARTICLES
- Advertisment -spot_img

Most Popular