Sunday, April 20, 2025
Homeಸುದ್ದಿಗಳುಬಿಜೆಪಿ ಎಸ್.ಸಿ ಮೋರ್ಚಾ ರಾಜ್ಯಾಧ್ಯಕ್ಷರಾಗಿ ಶಾಸಕ ಸಿಮೆಂಟ್ ಮಂಜು

ಬಿಜೆಪಿ ಎಸ್.ಸಿ ಮೋರ್ಚಾ ರಾಜ್ಯಾಧ್ಯಕ್ಷರಾಗಿ ಶಾಸಕ ಸಿಮೆಂಟ್ ಮಂಜು

ಬಿಜೆಪಿ ಎಸ್.ಸಿ ಮೋರ್ಚಾ ರಾಜ್ಯಾಧ್ಯಕ್ಷರಾಗಿ ಶಾಸಕ ಸಿಮೆಂಟ್ ಮಂಜು

ಸಕಲೇಶಪುರ: ಬಿಜೆಪಿ ಎಸ್.ಸಿ ಮೋರ್ಚಾ ರಾಜ್ಯಾಧ್ಯಕ್ಷರಾಗಿ ಸಕಲೇಶಪುರ ವಿಧಾನಸಭಾ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ಆಯ್ಕೆಯಾಗಿದ್ದಾರೆ.
ಇಂದು ತಾನೆ 43 ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಶಾಸಕ ಸಿಮೆಂಟ್ ಮಂಜುರವರು ಬಿಜೆಪಿ ರಾಜ್ಯ ಎಸ್.ಸಿ ಮೋರ್ಚಾ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು ಅವರ ಅಭಿಮಾನಿಗಳಿಗೆ ಸಂತೋಷ ತಂದಿದೆ. ಪ್ರಪ್ರಥಮ ಬಾರಿಗೆ ಶಾಸಕರಾದರು ಸಹ ಸಿಮೆಂಟ್ ಮಂಜುರವರಿಗೆ ರಾಜ್ಯಾಧ್ಯಕ್ಷ ಸ್ಥಾನ ದೊರಕಿರುವುದು ಅವರ ಸಂಘಟನಾ ಶೈಲಿಗೆ ಹೈಕಮಾಂಡ್ ಫಿದಾ ಆಗಿರುವುದು ಕಂಡು ಬಂದಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರರವರ ಆಪ್ತ ವಲಯದಲ್ಲಿ ಶಾಸಕ ಸಿಮೆಂಟ್ ಮಂಜು ಗುರುತಿಸಿಕೊಂಡಿದ್ದು ಅಲ್ಲದೆ ಆರ್.ಎಸ್.ಎಸ್ ಹಿನ್ನೆಲೆ ಸಹ ಅವರನ್ನು ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಲು ಪ್ರಮುಖ ಕಾರಣವಾಗಿದೆ. ನಿರಂತರವಾಗಿ ಕ್ಷೇತ್ರವನ್ನು ಸುತ್ತುತ್ತಿದ್ದ ಸಿಮೆಂಟ್ ಮಂಜುರವರು ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯವನ್ನು ಸುತ್ತಬೇಕಾದ ಅನಿವಾರ್ಯತೆ ಎದುರಾಗಿದೆ.

RELATED ARTICLES
- Advertisment -spot_img

Most Popular