ಸಕಲೇಶಪುರ: ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಡಿಸೆಂಬರ್ 19 ರಂದು ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹಕ್ಕೆ ಸಕಲೇಶಪುರ ತಾಲ್ಲೂಕಿನಿಂದ NPS ಸರ್ಕಾರಿ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟ ಯಶಸ್ವಿಗೊಳಿಸಬೇಕೆಂದು ತಾಲೂಕು NPS ನೌಕರರ ಸಂಘದ ಅಧ್ಯಕ್ಷರಾದ ದೊರೇಶ್ ಎಂ ಎಸ್ ತಿಳಿಸಿದ್ದಾರೆ. ಬೆಂಗಳೂರಿಗೆ ಹೋಗಲು ಸೋಮವಾರ ಬೆಳಗ್ಗೆ 4ಗಂಟೆಗೆ ಸಕಲೇಶಪುರದಿಂದ 4 ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ ಎಂದಿದ್ದಾರೆ.
ತಾಜಾ ಸುದ್ದಿ