ಸಕಲೇಶಪುರ: ಕ್ರಿಕೆಟ್ ಮಾತ್ರ ಕ್ರೀಡೆ ಅಲ್ಲ ಹಲವು ಕ್ರೀಡೆಗಳಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಂಡು ಭವಿಷ್ಯವನ್ನು ರೂಪಿಸಿಕೊಳ್ಳಬಹುದಾಗಿದೆ ಎಂದು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಕುಶ್ವಾನ್ ಹೇಳಿದರು.
ಪಟ್ಟಣದ ಸುಭಾಷ್ ಮೈದಾನದಲ್ಲಿ ರೋಟರಿ ಶಾಲೆಯ 42 ನೇ ವರ್ಷದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿ ವಿದ್ಯಾರ್ಥಿಗಳಿಗೆ ಇಂಜಿನಿಯರಿಂಗ್ ,ವೈದ್ಯಕೀಯ ಮಾತ್ರವಲ್ಲ ಕ್ರೀಡಾಕ್ಷೇತ್ರದಲ್ಲೂ ಅವಕಾಶವಿದೆ. ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯ ಸಹ ವೃದ್ದಿಸುತ್ತದೆ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಶಿವಾನಂದ್ ಮಾತನಾಡಿ ವಿದ್ಯೆ ಮಾತ್ರ ಅಲ್ಲ ಕ್ರೀಡೆ ಸಹ ವಿದ್ಯಾರ್ಥಿಗಳಿಗೆ ಅಗತ್ಯ ಎಂದರು.
ಈ ಸಂದರ್ಭದಲ್ಲಿ ರೋಟರಿ ಸಂಸ್ಥೆಯ ಅಧ್ಯಕ್ಷ ಸುಬ್ರಮಣ್ಯ, ಕಾರ್ಯದರ್ಶಿ ಸುರೇಶ್, ಖಚಾಂಚಿ ಡಾಕ್ಟರ್ ರವಿ ಕಿರಣ್, ಉಪಾಧ್ಯಕ್ಷ ವಿಜಯ್ ಕುಮಾರ್ ಜೈನ್, ಪ್ರಾಂಶುಪಾಲ ಸುಮಂತ್ ಭಾರ್ಗವ್,ಮುಖ್ಯೋಪಾಧ್ಯಾಯ ರುದ್ರೇಶ್ ಮುಂತಾದವರು ಹಾಜರಿದ್ದರು