ಸಕಲೇಶಪುರ: ತಾಲೂಕಿನ ಕ್ಯಾನಹಳ್ಳಿ ಗ್ರಾಮದಲ್ಲಿ ಭಾನುವಾರ ರಾತ್ರಿ ಅದ್ದೂರಿಯಿಂದ ಕಾರ್ತೀಕ ಮಹೋತ್ಸವ ಆಚರಿಸಲಾಯಿತು. ಬೀರಲಿಂಗೇಶ್ವರ ದೇವರನ್ನು ಗ್ರಾಮದಲ್ಲಿ ಅದ್ದೂರಿಯಾಗಿ ಮೆರವಣಿಗೆ ಮಾಡಿ ದೇವಸ್ಥಾನದಲ್ಲಿ ಪೂಜಾ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ಗ್ರಾಮವನ್ನು ಕೇಸರಿ ಧ್ವಜ ಬಂಟಿಂಗ್ಸ್, ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿತ್ತು. ಸಾವಿರಾರು ಮಂದಿ ಭಕ್ತಾಧಿಗಳು ಕಾರ್ಯಕ್ರಮಕ್ಕೆ ಆಗಮಿಸಿ ದೇವರ ಕೃಪೆಗೆ ಪಾತ್ರರಾದರು.