Tuesday, November 18, 2025
Homeಸುದ್ದಿಗಳುಸಕಲೇಶಪುರದೇಶದ ಆರ್ಥಿಕತೆಗೆ ಸಹಕಾರ ಕ್ಷೇತ್ರದ ಕೊಡುಗೆ ಅಪಾರ - ಸಿಮೆಂಟ್ ಮಂಜು

ದೇಶದ ಆರ್ಥಿಕತೆಗೆ ಸಹಕಾರ ಕ್ಷೇತ್ರದ ಕೊಡುಗೆ ಅಪಾರ – ಸಿಮೆಂಟ್ ಮಂಜು

ದೇಶದ ಆರ್ಥಿಕತೆಗೆ ಸಹಕಾರ ಕ್ಷೇತ್ರದ ಕೊಡುಗೆ ಅಪಾರ – ಸಿಮೆಂಟ್ ಮಂಜು 

ಬಾಳ್ಳುಪೇಟೆಯಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹ.

ಸಕಲೇಶಪುರ : ಸಹಕಾರ ಚಳವಳಿಗೆ ದೇಶದಲ್ಲಿ ಒಂದು ಶತಮಾನಕ್ಕೂ ಹೆಚ್ಚು ಇತಿಹಾಸವಿದ್ದು, ರಾಷ್ಟ್ರದ ಆರ್ಥಿಕ ಹಾಗೂ ಸಾಮಾಜಿಕ ಬೆಳವಣಿಗೆಗೆ ಸಹಕಾರ ಕ್ಷೇತ್ರದ ಕೊಡುಗೆ ಅಪಾರ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.

ಸೋಮವಾರ ತಾಲ್ಲೂಕಿನ ಬಾಳ್ಳುಪೇಟೆಯಲ್ಲಿ ಜಿಲ್ಲಾ ಸಹಕಾರ ಒಕ್ಕೂಟ, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ರಾಜ್ಯಸಹಕಾರ ಮಹಾ ಮಂಡಲ, ಸಹಕಾರ ಹಾಲು ಉತ್ಪಾದಕರ ಸಂಘಗಳು, ಸಕಲೇಶಪುರ- ಆಲೂರು ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಹಾಗೂ ತಾಲೂಕಿನ ಎಲ್ಲ ಸಹಕಾರ ಸಂಘಗಳು ಸಹಕಾರ ಆಡಳಿತ ಮತ್ತು ಲೆಕ್ಕ ಪರಿಶೋಧನ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನೆಡೆದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ಭಾಗದ ಸಹಕಾರಿ ಸಂಘಗಳು ಗ್ರಾಮೀಣ ಉದ್ಯೋಗಕ್ಕೆ ಉತ್ತೇಜನ ನೀಡಿ, ವಿಶೇಷವಾಗಿ ರೈತರು, ಮಹಿಳೆಯರು, ಯುವಕರು ಮತ್ತು ಸಣ್ಣ ಉದ್ಯಮಿಗಳಿಗೆ ದೊಡ್ಡ ಪ್ರಮಾಣದ ಉದ್ಯೋಗಾವಕಾಶಗಳನ್ನು ಸೃಷ್ಟಿಸಬೇಕು.ಸಹಕಾರ ಕ್ಷೇತ್ರಕ್ಕೆ ಸಚಿವಾಲಯ ಬೇಕೆಂಬ ಬಹುವರ್ಷಗಳ ಬೇಡಿಕೆ ಈಡೇರಿಸಲು ಕೇಂದ್ರ ಸಚಿವ ಅಮಿತ್ ಶಾ ಕಾರಣರಾದರು. ಸ್ವತಃ ಸಹಕಾರಿಯಾಗಿರುವ ಅವರು, ಪ್ರತ್ಯೇಕ ತಂತ್ರಾಂಶ ಪರಿಚಯಿಸುವ ಮೂಲಕ ಹಳ್ಳಿಗಾಡಿನಿಂದ ರಾಷ್ಟ್ರ ಮಟ್ಟದವರೆಗೆ ಎಲ್ಲ ಸಹಕಾರ ಸಂಸ್ಥೆಗಳು ಕಂಪ್ಯೂಟರೀಕೃತ ವ್ಯವಸ್ಥೆ ಅಡಿಯಲ್ಲಿ ಬರಲು ನೆರವಾದರು.ಗ್ರಾಮೀಣ ಜನರು ಸ್ವಾಭಿಮಾನದ ಬದುಕು ಕಾಣಲು ಸಹಕಾರ ಕ್ಷೇತ್ರದಿಂದ ಸಾಧ್ಯವಾಗಿದೆ. ಹಿರಿಯರ ತ್ಯಾಗ, ನಿಸ್ವಾರ್ಥ ಸೇವೆಯಿಂದ ಸಹಕಾರ ಕ್ಷೇತ್ರ ಎತ್ತರಕ್ಕೆ ಬೆಳೆದು ನಿಂತಿದೆ. ಸಮಾಜದ ಆರ್ಥಿಕ ಸಬಲೀಕರಣಕ್ಕೆ ಕಾರಣವಾಗಿರುವ ಸಹಕಾರ ಕ್ಷೇತ್ರದಲ್ಲಿ ದುಡಿಯುವವರ ಸಮಸ್ಯೆಗೂ ಸ್ಪಂದಿಸಬೇಕಾಗಿದೆ. ಸಹಕಾರ ಸಂಘಗಳ ನೌಕರರ ಪ್ರೋತ್ಸಾಹಧನ, ಹಾಲು ಸಂಘಗಳ ಪ್ರೋತ್ಸಾಹಧನದ ಮೊತ್ತ ಹೆಚ್ಚಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.

 ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷರಾದ ಸೋಮನಹಳ್ಳಿ ನಾಗರಾಜ್ ಮಾತನಾಡಿ,ಸ್ವಾತಂತ್ರ್ಯ ಪೂರ್ವದಿಂದಲೂ ಇದ್ದ ಸಹಕಾರ ಆಂದೋಲನಕ್ಕೆ ಸ್ವಾತಂತ್ರ್ಯೋತ್ತರ ಕಾಲದಲ್ಲಿ ಪಂಚವಾರ್ಷಿಕ ಯೋಜನೆಗಳ ಮೂಲಕ ಜವಾಹರಲಾಲ್ ನೆಹರೂ ಬಲ ತುಂಬಿವರು ಎಂದರು. ಜಿಲ್ಲಾ ಸಹಕಾರ ಒಕ್ಕೂಟ ಅಧ್ಯಕ್ಷರಾದ ಪ್ರಕಾಶ್ ಮಾತನಾಡಿ, ಹೈನುಗಾರಿಕೆಯಲ್ಲಿ ಜಿಲ್ಲೆ ದಾಪುಗಾಲು ಮೂಡಿಸಿದ್ದು ಹಾಲು ಉತ್ಪಾದನೆಯಲ್ಲಿ ರಾಜ್ಯಕ್ಕೆ ಹಾಸನ ಜಿಲ್ಲೆ ಎರಡನೇ ಸ್ಥಾನದಲ್ಲಿದೆ. ಇನ್ನು ಕೆಲವೇ ದಿನಗಳಲ್ಲಿ ಮೊದಲ ಸ್ಥಾನಕ್ಕೆರುವ ವಿಶ್ವಾಸ ವ್ಯಕ್ತಪಡಿಸಿದರು. ಈ ಜಿಲ್ಲೆಯಲ್ಲಿ ಹಾಲು ಉತ್ಪಾದನೆಯಲ್ಲಿ ಗಣನೀಯ ಸಾಧನೆಗೆ ಮಾಜಿ ಸಚಿವರಾದ ಎಚ್. ಡಿ ರೇವಣ್ಣನವರ ಕೊಡುಗೆ ಅಪಾರ ಎಂದು ಹೇಳಿದರು.

 ಇದೆ ವೇಳೆ ವಿವಿಧ ಸಹಕಾರ ಸಂಘಗಳಿಗೆ ಅಭಿನಂದಿಸಿ ಪ್ರಶಸ್ತಿ ನೀಡಲಾಯಿತು. ಕ್ಷೇತ್ರದ ವಿವಿಧ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಬಹುಮಾನದ ಚಿಕ್ ವಿತರಿಸಲಾಯಿತು.

 ಈ ಸಂದರ್ಭದಲ್ಲಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿರ್ದೇಶಕರಾದ ಕಬ್ಬಿನಹಳ್ಳಿ ಜಗದೀಶ್, ಜಿಲ್ಲಾ ಸಹಕಾರ ಒಕ್ಕೂಟ ಉಪಾಧ್ಯಕ್ಷ ಸೋಮೇಗೌಡ ಮುಖಂಡರಾದ ದ್ಯಾವೆಗೌಡ, ಎಚ್.ಪಿ ಮೋಹನ್, ಪಿ.ಎಲ್ ನಿಂಗರಾಜು, ಬಿ.ಬಿ ಲೋಕೇಶ್, ಬಿ. ಎಂ ನಾಗರಾಜ್, ಜೈ ಮಾರುತಿ ದೇವರಾಜ್, ಶಶಿಕುಮಾರ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

RELATED ARTICLES
- Advertisment -spot_img

Most Popular