Wednesday, January 22, 2025
Homeಸುದ್ದಿಗಳು10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಮೂವರು ಬಾಲಕರು ನಾಪತ್ತೆ.

10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಮೂವರು ಬಾಲಕರು ನಾಪತ್ತೆ.

10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಮೂವರು ಬಾಲಕರು ನಾಪತ್ತೆ.

ಪೋಷಕರಲ್ಲಿ ಹೆಚ್ಚಿದ ಆತಂಕ : ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಸಕಲೇಶಪುರ : 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂವರು ಬಾಲಕರು ನಾಪತ್ತೆಯಾಗಿರುವ ಘಟನೆ ಬುಧುವಾರ ತಾಲೂಕಿನ ಕುನಿಗನಹಳ್ಳಿ ಗ್ರಾಮದಲ್ಲಿ ನಡೆದಿದೆ.

 ಕುನಿಗನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಆದರವಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಶರತ್(16),ಧನಂಜಯ್(16),ಮುರುಳಿ(16)ನಾಪತ್ತೆಯಾದ ವಿದ್ಯಾರ್ಥಿಗಳು.

ಇಂದು ಬೆಳಿಗ್ಗೆ ಶಾಲೆಗೆಂದು ಮನೆಯಿಂದ ಹೊರಟವರು ಶಾಲೆಗೂ ತೆರಳದ ಸಂಜೆ ಮನೆಗೂ ವಾಪಸ್ ಆಗದೆ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.

 ಇದರಿಂದ ಮೂವರು ವಿದ್ಯಾರ್ಥಿಗಳ ಪೋಷಕರು ಆತಕೀಡಾಗಿದ್ದು ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ. ನಾಪತ್ತೆ ಪ್ರಕರಣ ದಾಖಲಿಸಿದ್ದಾರೆ

ಈ ಮಕ್ಕಳ ಬಗ್ಗೆ ಸುಳಿವು ಸಿಕ್ಕಲ್ಲಿ ಹತ್ತಿರದ ಪೋಲೀಸ್ ಠಾಣೆಗೆ ತಿಳಿಸಬೇಕೆಂದು ಪೋಷಕರು ಹಾಗೂ ಪೊಲೀಸರು ಮನವಿ ಮಾಡಿದ್ದಾರೆ.

RELATED ARTICLES
- Advertisment -spot_img

Most Popular