ಸಕಲೇಶಪುರ. ನಾಳೆ 29/12/2022ರ ಗುರುವಾರ ಬೆಳಗ್ಗೆ 11 ಗಂಟೆಗೆ ಪಟ್ಟಣದ ಕುಡುಗರಹಳ್ಳಿ ಬಡಾವಣೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕುವೆಂಪು ಜನ್ಮ ದಿನಾಚರಣೆ ಹಾಗೂ ನುಡಿ ನಮನ ಕಾರ್ಯಕ್ರಮ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಹಾಗೂ ಕಾಲೇಜಿನ ಕನ್ನಡ ವಿಭಾಗದ ಸಂಯುಕ್ತ ಆಶ್ರಯದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀಮತಿ ಶಾರದ ಗುರುಮೂರ್ತಿ ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತು, ತಾಲೂಕು ಘಟಕ, ಇವರು ನೆರವರಿಸಲಿದ್ದಾರೆ. ಕುವೆಂಪು ನುಡಿ -ನಮನದ ಮುಖ್ಯ ಭಾಷಣಕಾರರಾಗಿ ಡಾ. ಸಿ. ಚ. ಯತೀಶ್ವರ ಮುಖ್ಯಸ್ಥರು ಹಾಗೂ ಸಹ ಪ್ರಾಧ್ಯಾಪಕರು, ಕನ್ನಡ ವಿಭಾಗ ಎ.ವಿ.ಕೆ ಮಹಿಳಾ ಕಾಲೇಜು, ಹಾಸನ ಇವರು ಮಾತನಾಡಳಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆ ಡಾ. ಹರೀಶ ಎಂ. ಕೆ. ಪ್ರಾಂಶುಪಾಲರು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರು ವಹಿಸಿಕೊಂಡಿದ್ದು ಪ್ರಾಸ್ತಾವಿಕ ನುಡಿಯನ್ನು ರಂಗಕರ್ಮಿಗಳು ರಕ್ಷಿದಿ ಪ್ರಸಾದ್ ರವರು ನಡೆಸಿಕೊಡಲಿದ್ದಾರೆ.
ಕಾರ್ಯಕ್ರಮದಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕನ್ನಡ ರಾಜ್ಯೋತ್ಸವ ದ ಅಂಗವಾಗಿ ಕನ್ನಡ ನಾಡು-ನುಡಿ ಎಂಬ ವಿಷಯ ದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತಾಲ್ಲೂಕು ಮಟ್ಟದ ಪ್ರಬಂಧ ಸ್ಪರ್ಧೆ ಬಹುಮಾನ ಪಡೆದ ವಿಧ್ಯಾರ್ಥಿಗಳಿಗೆ ಪ್ರಶಸ್ತಿ ನಿಡಲಾಗುವುದು. ಈ ಎಲ್ಲಾ ಕಾರ್ಯಕ್ರಮಕ್ಕೆ ತಾಲ್ಲೊಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕನ್ನಡ ವಿಭಾಗದ ವತಿಯಿಂದ ಸ್ವಾಗತ ಕೋರಲಾಗಿದೆ.