ರಾಷ್ಟ್ರೀಯ ಹೆದ್ದಾರಿಯಲ್ಲಿ ಅವೈಜ್ಞಾನಿಕ ಡಿವೈಡರ್ :ರಸ್ತೆ ಮಧ್ಯದಲ್ಲೇ ಲಾರಿ ಪಲ್ಟಿ
ಸಕಲೇಶಪುರ : ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಚತುಷ್ಪದ ಹೆದ್ದಾರಿ ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರರ ವೈಜ್ಞಾನಿಕ ಕಾಮಗಾರಿಯಿಂದ ರಾಷ್ಟ್ರೀಯ ಹೆದ್ದಾರಿ ಈಗ ಸಾವಿನ ಹೆದ್ದಾರಿಯಾಗಿ ಮಾರ್ಪಟ್ಟಿದೆ.
ತಾಲೂಕಿನ ಬಾಗೆ ಗ್ರಾಮದ ವೃತ್ತದಲ್ಲಿ ಅವೈಜನಿಕವಾಗಿ ನಿರ್ಮಿಸಿರುವ ತಾತ್ಕಾಲಿಕ ಡಿವೈಡರ್ ನಿಂದ ದಿನಕ್ಕೆ ಅಪಘಾತಗಳ ಸರಮಾಲೆಯ ನಡೆಯುತ್ತಿದೆ.
ಕಳೆದ ರಾತ್ರಿ ಬೆಂಗಳೂರಿನಿಂದ ಮಂಗಳೂರು ಕಡೆಗೆ ಸರಕು ತುಂಬಿದ ಲಾರಿ ಡಿಬೇಲರಿಗೆ ಅಳವಡಿಸಿದ್ದ ಸಿಮೆಂಟ್ ಬ್ಲಾಕ್ ಗಳಿಗೆ ಡಿಕ್ಕಿಯಾಗಿ ಮಗುಚಿ ಬಿದ್ದಿದೆ. ಅದೃಷ್ಟವಾಶತ್ ಸಣ್ಣ ಪುಟ್ಟ ಗಾಯಗಳಿಂದ ಲಾರಿ ಚಾಲಕ ಬಚಾವಾಗಿದ್ದಾನೆ. ಈ ವೃತ್ತದಲ್ಲಿ ವಾಹನಸವರರು ಹಾಗೂ ರಸ್ತೆದಾಟುವ ಸಾರ್ವಜನಿಕರು ಜೀವ ಕೈಯಲ್ಲಿಡಿದು ದಾಟಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾಗಿದೆ.ಕಳೆದ 15 ದಿನಗಳಿಂದ ಬೈಕ್ ಹಾಗೂ ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದರು. ಇಷ್ಟೆಲ್ಲಾ ಅಪಘಾತಗಳು ನಡೆಯುತ್ತಿದ್ದರು ಪೊಲೀಸ್ ಇಲಾಖೆ ಹಾಗೂ ಹೆದ್ದಾರಿ ಅಧಿಕಾರಿಗಳು ಮಾತ್ರ ಕಣ್ಣು ಮುಚ್ಚಿ ಕುಳಿತಿರುವುದು ವಿಪರ್ಯಾಸವೇ ಸರಿ.