ಬೆಂಗಳೂರು, : ಕನ್ನಡ ಚಿತ್ರರಂಗದ ಹಿರಿಯ ನಟ ಲೋಹಿತಾಶ್ವ (80) ಅವರು ಮಂಗಳವಾರ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಲೋಹಿತಾಶ್ವ ಅವರಿಗೆ ಇಲ್ಲಿನ ಕುಮಾರಸ್ವಾಮಿ ಲೇಔಟ್‌ನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಕಂಚಿನ ಕಂಠದ ನಟ ಲೋಹಿತಾಶ್ವ ಹಲವಾರು ಕನ್ನಡ ಸಿನೆಮಾಗಳಲ್ಲಿ ಪೋಷಕ ಪಾತ್ರ ಹಾಗೂ ಖಳನಾಯಕನ ಪಾತ್ರಗಳಲ್ಲಿ ನಟಿಸಿದ್ದಾರೆ. ಲೋಹಿತಾಶ್ವ ಅವರು ಚಿತ್ರ ನಟ, ನಾಟಕಕಾರ ಮತ್ತು ನಿವೃತ್ತ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದು, ಅವರು 500ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ರಂಗ ನಾಟಕಗಳು ಹಾಗೂ ಧಾರಾವಾಹಿಗಳಲ್ಲಿ ಅಭಿನಯಿಸಿದ್ದಾರೆ. ನಟ ಶರತ್ ಲೋಹಿತಾಶ್ವ ಸೇರಿಂದಂತೆ ಮೂವರು ಮಕ್ಕಳು, ಕುಟುಂಬ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ