ಸಕಲೇಶಪುರ: ತಾಲೂಕಿನ ಯಸಳೂರು ಹೋಬಳಿ ಬೆಳೆಗಾರರ ಸಂಘವು ತನ್ನ ಹೋಬಳಿ ವ್ಯಾಪ್ತಿಯ ಸಹ ಸಂಘಗಳ ಸಹಭಾಗಿತ್ವದಲ್ಲಿ ವಿಚಾರ ಸಂಕಿರಣ ಮತ್ತು 8ನೇ ಮಾಸಿಕ ಸಭೆ ಕಾರ್ಯಕ್ರಮವನ್ನು ದಿನಾಂಕ 27.10.2022ರ ಗುರುವಾರದಂದು ಪಿ ಎ ಸಿ ಸಿ ಬಿ ಆವರಣ ಐಗೂರಿನಲ್ಲಿ ಹಮ್ಮಿಕೊಂಡಿತ್ತು. ತೆಂಕಲಗೂಡು ಬೃಹನ್ ಮಠ ಯಸಳೂರಿನ ಪರಮಪೂಜ್ಯ ಶ್ರೀ ಶ್ರೀ ಶ್ರೀ ಚನ್ನ ಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿಯವರು ದಿವ್ಯ ಸಾನಿಧ್ಯ ವಹಿಸಿದ್ದರು. ಯಸಳೂರು ಹೋಬಳಿ ಬೆಳಗಾರರ ಸಂಘದ ಅಧ್ಯಕ್ಷರಾದ ಡಾ. ಎಂ ಎಸ್ ರಾಮಚಂದ್ರ ರವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಹಾಸನ ಜಿಲ್ಲಾ ಪ್ಲಾಂಟರ್ಸ್ ಸಂಘದ ಅಧ್ಯಕ್ಷರಾದ ಕೆ.ಎನ್ ಸುಬ್ರಹ್ಮಣ್ಯ ರವರು, ಗೌರವ ಕಾರ್ಯದರ್ಶಿಗಳಾದ ಎಂ.ಬಿ ರಾಜೀವ್ ರವರು, ಕಾಫಿ ಮಂಡಳಿಯ ಉಪನಿರ್ದೇಶಕರಾದ ಮಲ್ಲಿಕಾರ್ಜುನ ರವರು, ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರಾದ ವಿಜಯ ಚಿತ್ರರವರು, ಕೃಷಿ ವಿಜ್ಞಾನ ಕೇಂದ್ರ ಕಂದಲಿ ಹಾಸನದ ಮಣ್ಣು ವಿಜ್ಞಾನಿಯಾದ ಅರುಣ್ ಕುಮಾರ್ ರವರು, ಹಾಸನ ಜಿಲ್ಲಾ ಪ್ಲಾಂಟರ್ಸ್ ಸಂಘದ ಪದಾಧಿಕಾರಿಗಳು ನಿರ್ದೇಶಕರು ಉಪಸ್ಥಿತರಿದ್ದರು. ವಿಜ್ಞಾನಿಯಾದ ಅರುಣ್ ಕುಮಾರ್ ರವರು ಮಣ್ಣಿನ ಮಹತ್ವದ ಬಗ್ಗೆ ಸಭೆಗೆ ಸಂಕ್ಷಿಪ್ತವಾಗಿ ಮಾಹಿತಿ ನೀಡಿದರು, ಹಾಸನ ಜಿಲ್ಲಾ ಪ್ಲಾಂಟರ್ಸ್ ಸಂಘದ ಅಧ್ಯಕ್ಷರು ಸಂಘಟನೆಯ ಕಾರ್ಯ ಚಟುವಟಿಕೆಗಳು ಹಾಗೂ ಸಂಘಟನೆಯನ್ನು ಸುಭದ್ರ ಗೊಳಿಸುವ ಬಗ್ಗೆ ಸಂಕ್ಷಿಪ್ತವಾಗಿ ತಿಳಿಸಿದರು. ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರು ತೋಟಗಾರಿಕಾ ಇಲಾಖೆಯ ಸೇವೆ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. 2022ನೇ ಸಾಲಿನಲ್ಲಿ ಉಂಟಾದ ಅತಿವೃಷ್ಟಿ ಹಾನಿಗೆ ಸೂಕ್ತ ಪರಿಹಾರ ಒದಗಿಸಿಕೊಡುವಲ್ಲಿ ಶ್ರಮಿಸಿದ ಹಾಸನ ಜಿಲ್ಲಾ ಪ್ಲಾಂಟರ್ಸ್ ಸಂಘದ ಅಧ್ಯಕ್ಷರಾದ ಕೆ ಎನ್ ಸುಬ್ರಹ್ಮಣ್ಯ ರವರನ್ನು, ಗೌರವ ಕಾರ್ಯದರ್ಶಿಗಳಾದ ಎಮ್ ಬಿ ರಾಜೀವ್ ರವರನ್ನು, ಹಾಗೂ ಕಾಫಿ ಮಂಡಳಿ ಉಪನಿರ್ದೇಶಕರಾದ ಮಲ್ಲಿಕಾರ್ಜುನ್ ರವರನ್ನು ಅಭಿನಂದಿಸಲಾಯಿತು. ಯಸಳೂರು ಹೋಬಳಿ, ಬೆಳಗಾರರ ಸಂಘದ ಎಲ್ಲಾ ಪದಾಧಿಕಾರಿಗಳು ಹಾಗೂ ನಿರ್ದೇಶಕರು ಮತ್ತು ಎಲ್ಲಾ ಪಂಚಾಯಿತಿ ಮಟ್ಟದ ಬೆಳಗಾರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಉತ್ತಮ ಕಾರ್ಯಕ್ರಮವನ್ನು ನೆಡೆಸಿ ಬೆಳಗಾರರಿಗೆ ಉಪಯುಕ್ತ ಮಾಹಿತಿಗಳನ್ನು ಸಹ ನೀಡಲಾಯಿತು.