Saturday, November 23, 2024
Homeಸುದ್ದಿಗಳುರಾಜ್ಯಸಕಲೇಶಪುರಕ್ಕೆ ಡಿ.14 ರಂದು ಯಡಿಯೂರಪ್ಪ, ಬೊಮ್ಮಾಯಿ ಆಗಮನ

ಸಕಲೇಶಪುರಕ್ಕೆ ಡಿ.14 ರಂದು ಯಡಿಯೂರಪ್ಪ, ಬೊಮ್ಮಾಯಿ ಆಗಮನ

ಬೆಂಗಳೂರು/ಸಕಲೇಶಪುರ (ಅ.11): ಮುಂಬರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ರಾಜಕೀಯ ಪಕ್ಷಗಳು ಭರದಿಂದ ಸಿದ್ಧತೆ ಆರಂಭಿಸಿದ್ದು, ಕಾಂಗ್ರೆಸ್‌ನ ಭಾರತ್‌ ಜೋಡೋ ಯಾತ್ರೆ ವೇಳೆಯಲ್ಲಿಯೇ ಬಿಜೆಪಿಯ ಜನಸಂಕಲ್ಪ ಯಾತ್ರೆ ಕೂಡ ಮಂಗಳವಾರ ಆರಂಭವಾಗಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದಲ್ಲಿ ಜಂಟಿಯಾಗಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಈ ಯಾತ್ರೆ ಸಂಚರಿಸಲಿದೆ. ಮಂಗಳವಾರ ರಾಯಚೂರು ಜಿಲ್ಲೆಯಿಂದ ಆರಂಭಗೊಳ್ಳುವ ಯಾತ್ರೆಯು ಡಿ.25ಕ್ಕೆ ರಾಮನಗರ ಜಿಲ್ಲೆಯಲ್ಲಿ ಅಂತ್ಯವಾಗಲಿದೆ.

 

 

ರಾಯಚೂರು, ಕೊಪ್ಪಳ, ವಿಜಯಪುರ, ವಿಜಯನಗರ, ಬೀದರ್, ಯಾದಗಿರಿ, ಕಲಬುರಗಿ, ಬೆಳಗಾವಿ, ಗದಗ, ಧಾರವಾಡ, ಹಾವೇರಿ, ಉತ್ತರಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣಕನ್ನಡ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಾಗಲಕೋಟೆ, ಹಾಸನ, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳ 52 ವಿಧಾನಸಭಾ ಕ್ಷೇತ್ರಗಳಲ್ಲಿ ಯಾತ್ರೆ ಹಾದು ಹೋಗಲಿದೆ.

 

ಯಾತ್ರೆಯು ಹಾಸನ ಜಿಲ್ಲೆಯ ಅರಸೀಕೆರೆ ಹಾಗೂ ಸಕಲೇಶಪುರ ವಿಧಾನಸಭಾ ಕ್ಷೇತ್ರಕ್ಕೆ ಆಗಮಿಸಲಿದ್ದು ಹಾಲಿ ಮತ್ತು ಮಾಜಿ ಮುಖ್ಯಮಂತ್ರಿಗಳು ಕ್ಷೇತ್ರದಲ್ಲಿ ಬೃಹತ್ ಬಹಿರಂಗ ಸಭೆಯಲ್ಲಿ ಭಾಗವಹಿಸಿಲಿದ್ದಾರೆ.

 

 

 

 

 

 

RELATED ARTICLES
- Advertisment -spot_img

Most Popular