Monday, November 25, 2024
Homeಸುದ್ದಿಗಳುBreaking; ಯಶವಂತಪುರ-ಮಂಗಳೂರು ಜಂಕ್ಷನ್ ವಿಶೇಷ ರೈಲು, ವೇಳಾಪಟ್ಟಿ

Breaking; ಯಶವಂತಪುರ-ಮಂಗಳೂರು ಜಂಕ್ಷನ್ ವಿಶೇಷ ರೈಲು, ವೇಳಾಪಟ್ಟಿ

Breaking; ಯಶವಂತಪುರ-ಮಂಗಳೂರು ಜಂಕ್ಷನ್ ವಿಶೇಷ ರೈಲು, ವೇಳಾಪಟ್ಟಿ

ಬೆಂಗಳೂರು, ಡಿಸೆಂಬರ್ 27; ಡಿಸೆಂಬರ್ ಕೊನೆಯಲ್ಲಿ ರಜೆ ಹಾಕಿ ವಿವಿಧ ಪ್ರದೇಶಗಳಿಗೆ ತೆರಳುವ ಜನರ ಸಂಖ್ಯೆ ಹೆಚ್ಚಾಗಿದೆ. ಈ ಸಂದರ್ಭದಲ್ಲಿ ಉಂಟಾಗುವ ಜನರ ದಟ್ಟಣೆ ತಪ್ಪಿಸಲು ನೈಋತ್ಯ ರೈಲ್ವೆ ವಿಶೇಷ ರೈಲುಗಳನ್ನು ಓಡಿಸುತ್ತಿದೆ.

ನೈಋತ್ಯ ರೈಲ್ವೆ ಬೆಂಗಳೂರಿನ ಯಶವಂತಪುರ- ಮಂಗಳೂರು ಜಂಕ್ಷನ್-ಯಶವಂತಪುರ ನಡುವೆ ಸಂಚಾರ ನಡೆಸುವ ವಿಶೇಷ ರೈಲನ್ನು ಘೋಷಣೆ ಮಾಡಿದೆ. ಒಂದು ಬಾರಿ ಮಾತ್ರ ಈ ರೈಲು ಸಂಚರಿಸಲಿದೆ.

ರೈಲು ನಂಬರ್ 06565/ 06566 ರೈಲು ಯಶವಂತಪುರ-ಮಂಗಳೂರು ಜಂಕ್ಷನ್-ಯಶವಂತಪುರ ನಡುವೆ ಸಂಚಾರ ನಡೆಸಲಿದೆ. ಈ ವಿಶೇಷ ರೈಲಿಗೆ ಟಿಕೆಟ್ ಬುಕ್ಕಿಂಗ್ ಸೌಲಭ್ಯ ಡಿಸೆಂಬರ್ 27ರ ಮಂಗಳವಾರ ಆರಂಭವಾಗಿದೆ.

ವೇಳಾಪಟ್ಟಿ; ರೈಲು ಸಂಖ್ಯೆ 06565 ಯಶವಂಮತಪುರ-ಮಂಗಳೂರು ಜಂಕ್ಷನ್ ರೈಲು ಯಶವಂತಪುರದಿಂದ ಡಿಸೆಂಬರ್ 28ರಂದು ಯಶವಂತಪುರದಿಂದ 23:55ಕ್ಕೆ ಹೊರಡಲಿದೆ. ಮರುದಿನ ಬೆಳಗ್ಗೆ 9.50ಕ್ಕೆ ಮಂಗಳೂರು ಜಂಕ್ಷನ್ ತಲುಪುತ್ತದೆ.

ರೈಲು ಸಂಖ್ಯೆ 06566 ಮಂಗಳೂರು ಜಂಕ್ಷನ್-ಯಶವಂತಪುರ ರೈಲು ಡಿಸೆಂಬರ್ 29ರಂದು 17 ಗಂಟೆಗೆ ಮಂಗಳೂರು ಜಂಕ್ಷನ್‌ನಿಂದ ಹೊರಡಲಿದೆ. ಮರುದಿನ ಬೆಳಗ್ಗೆ 4 ಗಂಟೆಗೆ ಯಶವಂತಪುರ ಜಂಕ್ಷನ್ ತಲುಪಲಿದೆ.

ಈ ರೈಲು 4 ಎಸಿ 2 ಟೈರ್, 11 ಎಸಿ 3 ಟೈರ್, 1 ಸಾಮಾನ್ಯ ಸೆಕೆಂಡ್ ಕ್ಲಾಸ್, 1 ಲಗ್ಗೇಜ್ ಕಂ ಬ್ರೇಕ್ ವ್ಯಾನ್ ಹೊಂದಿದೆ. ರಜಾ ದಿನಗಳಲ್ಲಿನ ಜನರ ದಟ್ಟಣೆ ಕಡಿಮೆ ಮಾಡಲು ಮಾತ್ರ ಈ ರೈಲು ಓಡಿಸಲಾಗುತ್ತಿದೆ. ಇದನ್ನು ಯಾವುದೇ ಕಾರಣಕ್ಕೂ ಮುಂದುವರೆಸುವುದಿಲ್ಲ.

ನಿಲ್ದಾಣಗಳು; ಯಶವಂತಪುರದಿಂದ ಹೊರಡುವ ರೈಲು ಚಿಕ್ಕಬಣಾವರ, ನೆಲಮಂಗಲ, ಕುಣಿಗಲ್, ಶ್ರವಣಬೆಳಗೊಳ, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಮಣ್ಯ ರಸ್ತೆ, ಕಬಕ ಪುತ್ತೂರು, ಬಂಟ್ವಾಳ, ಮಂಗಳೂರು ಜಂಕ್ಷನ್‌ಗಳಲ್ಲಿ ನಿಲುಗಡೆ ಹೊಂದಿದೆ.

RELATED ARTICLES
- Advertisment -spot_img

Most Popular